ಚುನಾವಣಾ ಆಯೋಗದ ಸಾಂದರ್ಭಿಕ ಚಿತ್ರ 
ದೇಶ

ಚುನಾವಣಾ ಆಯೋಗದಿಂದ ಇಂದು ಸಂಜೆ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಪ್ರಕಟವಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಇಂದು ಸಂಜೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಿದೆ. ಈ ರಾಜ್ಯಗಳ ವಿಧಾನಸಭೆ ಅವಧಿ ಮೇ ಮತ್ತು ಜೂನ್ ತಿಂಗಳ ಬೇರೆ ಬೇರೆ ದಿನಗಳಂದು ಅಂತ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಚುನಾವಣೆಯ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಈಗಾಗಲೇ ಗರಿಗೆದರಿದ್ದು, ವಿವಿಧ ಪಕ್ಷಗಳ ನಾಯಕರು ಹಲವು ಕಾರ್ಯಕ್ರಮ ಆಯೋಜನೆ ಮೂಲಕ ಜನರನ್ನು ಸಂಪರ್ಕಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video