ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ 
ದೇಶ

ಎಪ್ಸ್ಟೀನ್ ಲಿಂಕ್ ಆರೋಪ: 10 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪುತ್ರಿ!

ದೆಹಲು ಹೈಕೋರ್ಟ್​ನಲ್ಲಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವ ಹಿಮಾಯನಿ ಪುರಿ ಅವರು, ತಮ್ಮ ವಿರುದ್ಧ ವಿಷಯವನ್ನು ಪ್ರಕಟಿಸದಂತೆ ಶಾಶ್ವತ ಮತ್ತು ಕಡ್ಡಾಯ ತಡೆಯಾಜ್ಞೆ, 10 ಕೋಟಿ ರೂ. ಪರಿಹಾರ ಮತ್ತು ಬೇಷರತ್ತಾದ ಕ್ಷಮೆಯಾಚನೆ ಕೋರಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ಹಿಮಾಯನಿ ಪುರಿ ಅವರು ಜೆಫ್ರಿ ಎಪ್ಸ್ಟೀನ್ ಅವರ ಕ್ರಿಮಿನಲ್ ಚಟುವಟಿಕೆಗಳಿಗೆ ಮತ್ತು ತಮಗೂ ನಂಟು ಕಲ್ಪಿಸುವ ಮಾನಹಾನಿಕರ ವಿಷಯವನ್ನು ಹರಡಿದ್ದಕ್ಕಾಗಿ ಹಲವಾರು ವ್ಯಕ್ತಿಗಳು ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ದೆಹಲು ಹೈಕೋರ್ಟ್​ನಲ್ಲಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವ ಹಿಮಾಯನಿ ಪುರಿ ಅವರು, ತಮ್ಮ ವಿರುದ್ಧ ವಿಷಯವನ್ನು ಪ್ರಕಟಿಸದಂತೆ ಶಾಶ್ವತ ಮತ್ತು ಕಡ್ಡಾಯ ತಡೆಯಾಜ್ಞೆ, 10 ಕೋಟಿ ರೂ. ಪರಿಹಾರ ಮತ್ತು ಬೇಷರತ್ತಾದ ಕ್ಷಮೆಯಾಚನೆ ಕೋರಿದ್ದಾರೆ.

ಸಿವಿಲ್ ಮೊಕದ್ದಮೆಯ ಪ್ರಕಾರ, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಆರೋಪಗಳನ್ನು ಹರಡುವ ಮೂಲಕ ತನ್ನ ಖ್ಯಾತಿಗೆ ಕಳಂಕ ತರಲು ಸಂಘಟಿತ ಮತ್ತು ದುರುದ್ದೇಶಪೂರಿತ ಆನ್‌ಲೈನ್ ಅಭಿಯಾನ ಆಯೋಜಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಫೆಬ್ರವರಿ 22, 2026 ರಂದು ತಮ್ಮ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳು, ಲೇಖನಗಳು, ವಿಡಿಯೋಗಳು, ಥ್ರೆಡ್‌ಗಳು, ಥಂಬ್‌ನೇಲ್‌ಗಳು ಮತ್ತು ಶೀರ್ಷಿಕೆಗಳ ಸರಣಿಯನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಯಿತು. ಅದರಲ್ಲಿ ತಮ್ಮ ಮತ್ತು ಎಪ್ಸ್ಟೀನ್ ನಡುವಿನ ಸಂಬಂಧವನ್ನು ತಪ್ಪು ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಹೇಳಿದ್ದಾರೆ. ಈ ವಿಷಯವು ತಮ್ಮ ಖ್ಯಾತಿ ಮತ್ತು ವೈಯಕ್ತಿಕ ವಿಶ್ವಾಸಾರ್ಹತೆಗೆ ಗಂಭೀರ ಹಾನಿಯನ್ನುಂಟುಮಾಡಿದೆ ಎಂದು ಆರೋಪಿಸಿದ್ದಾರೆ.

ಜೆಫ್ರಿ ಎಪ್ಸ್ಟೀನ್ ಜೊತೆ ನೇರ ಅಥವಾ ಪರೋಕ್ಷ ವ್ಯವಹಾರ, ಹಣಕಾಸು, ವೈಯಕ್ತಿಕ ಅಥವಾ ನೆಟ್‌ವರ್ಕ್ ಸಂಪರ್ಕಗಳನ್ನು ಹೊಂದಿದ್ದಾರೆ ಎಂದು ಸೂಚಿಸುವ ಆಧಾರರಹಿತ ಆರೋಪಗಳನ್ನು ಪ್ರತಿವಾದಿಗಳು ಸೃಷ್ಟಿಸಿದ್ದಾರೆ ಮತ್ತು ಪ್ರಸಾರ ಮಾಡಿದ್ದಾರೆ. ಅವರು ಎಪ್ಸ್ಟೀನ್ ಅಥವಾ ಅವರ ಸಹಚರರಿಂದ ಹಣಕಾಸಿನ ಪ್ರಯೋಜನಗಳನ್ನು ಪಡೆದಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಲೆಹ್ಮನ್ ಬ್ರದರ್ಸ್‌ನ ಪತನಕ್ಕೆ ರಾಬರ್ಟ್ ಮಿಲ್ಲಾರ್ಡ್ ಪುರಿಯವರೊಂದಿಗೆ ಕೆಲಸ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಪ್ರಕಟಿಸಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಎಕ್ಸ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಲಿಂಕ್ಡ್‌ಇನ್ ಸೇರಿದಂತೆ ಹಲವಾರು ಪ್ಲಾಟ್​​ಫಾರ್ಮ್​ಗಳು, ಬ್ಲಾಗ್‌ಗಳು ಮತ್ತು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಲ್ಲಿ ಈ ವಿಷಯವನ್ನು ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ