ಮಮತಾ ಬ್ಯಾನರ್ಜಿ PTI
ದೇಶ

ಬಂಗಾಳ ಚುನಾವಣೆ: 291 ಸ್ಥಾನಗಳಲ್ಲಿ ಮಾತ್ರ TMC ಸ್ಪರ್ಧೆ; ಉಳಿದ ಸ್ಥಾನಗಳ ಕಥೆ ಏನು?

2026 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಟಿಎಂಸಿ ಮಂಗಳವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ತಮ್ಮ ಪಕ್ಷ ರಾಜ್ಯದ 294 ಸ್ಥಾನಗಳ ಪೈಕಿ 291 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇಂದು ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಡಾರ್ಜಿಲಿಂಗ್ ಬೆಟ್ಟಗಳಲ್ಲಿರುವ ಉಳಿದ ಮೂರು ಕ್ಷೇತ್ರಗಳಲ್ಲಿ ಅನಿತ್ ಥಾಪಾ ನೇತೃತ್ವದ ಭಾರತೀಯ ಗೂರ್ಖಾ ಪ್ರಜಾತಾಂತ್ರಿಕ ಮೋರ್ಚಾ(ಬಿಜಿಪಿಎಂ) ಸ್ಪರ್ಧಿಸಲಿದೆ ಎಂದು ತಿಳಿಸಿದರು.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯ ಅಧ್ಯಕ್ಷ ಸುಬ್ರತಾ ಬಕ್ಷಿ ಅವರೊಂದಿಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ದೀದಿ, "ನಾವು 294 ಸ್ಥಾನಗಳ ಪೈಕಿ 291 ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ. ಉಳಿದ ಮೂರು ಸ್ಥಾನಗಳಲ್ಲಿ ಡಾರ್ಜಿಲಿಂಗ್ ಬೆಟ್ಟಗಳಲ್ಲಿ ನಮ್ಮ ಮಿತ್ರ ಪಕ್ಷ ಅನಿತ್ ಥಾಪಾ ನೇತೃತ್ವದ ಬಿಜಿಪಿಎಂ ಸ್ಪರ್ಧಿಸಲಿದೆ" ಎಂದರು.

2026 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

"2026 ರ ವಿಧಾನಸಭಾ ಚುನಾವಣೆಯಲ್ಲಿ ನಾವು 226ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ" ಎಂದು ಅವರು ಪ್ರತಿಪಾದಿಸಿದರು.

ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯದ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸಂಘಟನೆಯಲ್ಲಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ವಿರೋಧ ಪಕ್ಷವಾದ ಭಾರತೀಯ ಜನತಾ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ಮುಂಬರುವ ಚುನಾವಣೆಯಲ್ಲಿ ಕೇಸರಿ ಪಕ್ಷದ ಸಂಖ್ಯೆ ಕುಸಿಯಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್