ಅಸ್ಸಾಂ ಸಿಎಂ ಶರ್ಮಾ ಜೊತೆಗೆ ಪ್ರದ್ಯುತ್ ಬೊರ್ಡೊಲಾಯ್  
ದೇಶ

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲಾಯ್ ಬಿಜೆಪಿಗೆ ಸೇರ್ಪಡೆ!

ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೊರ್ಡೊಲಾಯ್ ಇಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ನವದೆಹಲಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ. ಹಾಲಿ ಸಂಸದ ಪ್ರದ್ಯುತ್ ಬೊರ್ಡೊಲಾಯ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೊರ್ಡೊಲಾಯ್ ಇಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಶರ್ಮಾ, ಹಾಲಿ ಕಾಂಗ್ರೆಸ್ ಸಂಸದ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೊರ್ಡೊಲಾಯ್ ಸೇರ್ಪಡೆಯಿಂದ ಬಿಜೆಪಿ ಖಂಡಿತವಾಗಿ ಬಲವರ್ಧನೆಯಾಗಲಿದೆ. ಅವರ ಸೇರ್ಪಡೆಗೆ ಇಂದು ಬೆಳಗ್ಗೆ ಪಕ್ಷದ ರಾಷ್ಟ್ರೀಯ ಮಟ್ಟದ ನಾಯಕರು ಅನುಮೋದನೆ ನೀಡಿದ್ದರು. ಹಾಲಿ ಸಂಸದರ ಅವಧಿ ಇನ್ನೂ ಮೂರು ವರ್ಷ ಇದೆ ಎಂದು ತಿಳಿಸಿದರು.

ಒಂದೇ ತಿಂಗಳಲ್ಲಿ ಇಬ್ಬರ ನಿರ್ಗಮನ: ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಬಿಜೆಪಿ ಸೇರ್ಪಡೆಯಾದ ಒಂದು ತಿಂಗಳ ಅವಧಿಯಲ್ಲಿ ಇದೀಗ ಮತ್ತೊರ್ವ ನಾಯಕ ಬಿಜೆಪಿ ಸೇರಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದೆ.

ಈ ಮಧ್ಯೆ ಪ್ರದ್ಯುತ್ ಬೊರ್ಡೊಲಾಯ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಟಿಕೆಟ್ ಹಂಚಿಕೆಯಲ್ಲಿ ಅಸಮಧಾನದಿಂದ ಬೊರ್ಡೊಲೊಯಿ ರಾಜೀನಾಮೆ ನೀಡಿದ್ದಾರೆ ಎಂದರು.

ರಾಜೀನಾಮೆ ನೀಡುವ ಮುನ್ನ ಅವರೊಂದಿಗೆ ಮಾತನಾಡಲು ಬಯಸಿದ್ದೇವು. ಆದರೆ, ತಮ್ಮನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿದ್ದಾರೆ. ಇದೊಂದು ದುರಾದೃಷ್ಟಕರವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT