ಯೋಗೇಂದ್ರ ಸಾವೊ 
ದೇಶ

ಸಿಎಂ ಹೇಮಂತ್ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವೊ ಕಾಂಗ್ರೆಸ್ ನಿಂದ ಉಚ್ಚಾಟನೆ

ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಟೀಕಿಸಿದ್ದ ಮಾಜಿ ಸಚಿವ ಯೋಗೇಂದ್ರ ಸಾವೊ ಅವರನ್ನು ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯು, ಮೂರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.

ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.

ಯೋಗೇಂದ್ರ ಸಾವೊ ಅವರು ಪಕ್ಷದ ಶಿಸ್ತು ಉಲ್ಲಂಘಿಸಿ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿದ್ದಾರೆ. ಗುರುವಾರ, ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಇದನ್ನು ಪಕ್ಷದ ಶಿಸ್ತು ಸಮಿತಿ ತೀವ್ರ ಗಂಭೀರವಾಗಿ ಪರಿಗಣಿಸಿದೆ.

ಯೋಗೇಂದ್ರ ಸಾಹು ಅವರು ಗುರುವಾರ ಫೇಸ್‌ಬುಕ್ ಲೈವ್ ಮೂಲಕ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಅವರು ಜಾರ್ಖಂಡ್ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ ಎಂದು ಜಾರ್ಖಂಡ್ ಕಾಂಗ್ರೆಸ್ ನ ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಓರಾನ್ ಅವರು ತಮ್ಮ ಆದೇಶದಲ್ಲಿ, ಕಾಂಗ್ರೆಸ್ ಪಕ್ಷವು ಪ್ರಸ್ತುತ ಜಾರ್ಖಂಡ್ ಸರ್ಕಾರದ ಭಾಗವಾಗಿದ್ದು, ಮುಖ್ಯಮಂತ್ರಿಯ ವಿರುದ್ಧ ನಿಂದನೀಯ ಭಾಷೆ ಬಳಸುವುದು ಕಾಂಗ್ರೆಸ್ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದಂತೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ