ಬಹ್ರೇನ್ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆಯ ಸಾಂದರ್ಭಿಕ ಚಿತ್ರ 
ದೇಶ

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಹ್ರೇನ್‌ನ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಅವರೊಂದಿಗೆ ಚರ್ಚಿಸಿದ್ದು, ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.

ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, "ಬಹ್ರೇನ್ ರಾಜ, ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗಿನ ಚರ್ಚೆ ಫಲಪ್ರದವಾಗಿದೆ. ಅವರಿಗೆ ಮತ್ತು ಬಹ್ರೇನ್ ಜನರಿಗೆ ಈದ್ ಅಲ್-ಫಿತರ್ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ. ಈ ಪ್ರದೇಶದಲ್ಲಿನ ಇಂಧನ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದೇವೆ. ಜಾಗತಿಕ ಆಹಾರ, ಇಂಧನ ಮತ್ತು ರಸಗೊಬ್ಬರ ಸುರಕ್ಷತೆಯ ಮೇಲೆ ಅವುಗಳ ಪ್ರತಿಕೂಲ ಪರಿಣಾಮ ಕುರಿತು ಪ್ರಮುಖವಾಗಿ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ಬಹ್ರೇನ್‌ನಲ್ಲಿರುವ ಭಾರತೀಯ ಸಮುದಾಯದ ಯೋಗಕ್ಷೇಮಕ್ಕಾಗಿ ರಾಜ, ಹಮದ್ ಬಿನ್ ಇಸಾ ಅಲ್ ಖಲೀಫಾ ಅವರ ನಿರಂತರ ಬೆಂಬಲಕ್ಕಾಗಿ ಧನ್ಯವಾದವನ್ನು ಪ್ರಧಾನಿ ಮೋದಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್