ಅಸೀಮ್ ಆರ್. ಮಹಾಜನ್ 
ದೇಶ

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

ಮಾರ್ಚ್ 18 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, ಇದರೊಂದಿಗೆ ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಾವುನೋವುಗಳ ಸಂಖ್ಯೆ ಆರಕ್ಕೆ ಏರಿದೆ ಎಂದು ಅವರು ತಿಳಿಸಿದ್ದಾರೆ.

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ದಾಳಿಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರ ವಾಪಸಾತಿಗಾಗಿ ಸ್ಥಳೀಯ ಅಧಿಕಾರಿಗಳೊಂದಿಗೆ ನೆರವು ಮತ್ತು ಸಮನ್ವಯ ಸಾಧಿಸುತ್ತಿದ್ದೇವೆ ಎಂದು ಹೆಚ್ಚುವರಿ ಕಾರ್ಯದರ್ಶಿ(ಗಲ್ಫ್) ಅಸೀಮ್ ಆರ್. ಮಹಾಜನ್ ಅವರು ಹೇಳಿದ್ದಾರೆ.

ಮಾರ್ಚ್ 18 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, ಇದರೊಂದಿಗೆ ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಾವುನೋವುಗಳ ಸಂಖ್ಯೆ ಆರಕ್ಕೆ ಏರಿದೆ ಎಂದು ಅವರು ತಿಳಿಸಿದ್ದಾರೆ.

"ಮಾರ್ಚ್ 18 ರಂದು ನಡೆದ ಇತ್ತೀಚಿನ ಘಟನೆಗಳಿಂದಾಗಿ ರಿಯಾದ್‌ನಲ್ಲಿ ಭಾರತೀಯ ಪ್ರಜೆಯ ದುರಂತ ನಿಧನಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ" ಮತ್ತು ಮೃತರ ಕುಟುಂಬ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಅಲ್ಲದೆ "ಈ ವಿಷಯದಲ್ಲಿ ನಾವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಬದ್ಧರಾಗಿದ್ದೇವೆ" ಎಂದು ಹೇಳಿದೆ.

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ MEAಯ ಹೆಚ್ಚುವರಿ ಕಾರ್ಯದರ್ಶಿ(ಗಲ್ಫ್) ಅಸೀಮ್ ಆರ್. ಮಹಾಜನ್, ಕಾಣೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ಮೃತ ದೇಹಗಳನ್ನು ಭಾರತಕ್ಕೆ ಹಿಂದಿರುಗಿಸಲು ಅನುಕೂಲವಾಗುವಂತೆ ಭಾರತ ಹಲವು ದೇಶಗಳ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

"ದುರದೃಷ್ಟವಶಾತ್ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ. ಸೌದಿ ಅರೇಬಿಯಾ, ಓಮನ್, ಇರಾಕ್ ಮತ್ತು ಯುಎಇಯಲ್ಲಿರುವ ನಮ್ಮ ಕಾರ್ಯಾಚರಣೆಗಳು ಕಾಣೆಯಾದ ಭಾರತೀಯ ಪ್ರಜೆಯ ಬಗ್ಗೆ ಮತ್ತು ಮೃತ ಭಾರತೀಯ ಪ್ರಜೆಗಳ ಮೃತದೇಹಗಳನ್ನು ಭಾರತಕ್ಕೆ ಬೇಗನೆ ವಾಪಸ್ ಕಳುಹಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ" ಎಂದು ಮಹಾಜನ್ ತಿಳಿಸಿದ್ದಾರೆ.

ಗಲ್ಫ್ ಪ್ರದೇಶದಿಂದ ಪ್ರಯಾಣ ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದೆ, ಗಮನಾರ್ಹ ಸಂಖ್ಯೆಯ ಪ್ರಯಾಣಿಕರು ಈಗಾಗಲೇ ಭಾರತಕ್ಕೆ ಮರಳುತ್ತಿದ್ದಾರೆ ಎಂದು ಅವರು ಹೇಳಿದರು.

"ಈ ಪ್ರದೇಶದಿಂದ ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಪರಿಸ್ಥಿತಿ ಸುಧಾರಿಸುತ್ತಲೇ ಇದೆ. ಫೆಬ್ರವರಿ 28 ರಿಂದ ಇಲ್ಲಿಯವರೆಗೆ, ಸುಮಾರು 300,000 ಪ್ರಯಾಣಿಕರು ಈ ಪ್ರದೇಶದಿಂದ ಭಾರತಕ್ಕೆ ಮರಳಿದ್ದಾರೆ" ಎಂದು MEA ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ