ಸಾಂದರ್ಭಿಕ ಚಿತ್ರ  
ದೇಶ

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.

ನವದೆಹಲಿ: ಸಿಲಿಂಡರ್ ಗಳಿಲ್ಲದೆ ಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಶನಿವಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ.

​​ಮನೆಗಳಿಗೆ ಅಡಿಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಸಹಾಯ ಮಾಡುತ್ತಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.

ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಪಶ್ಚಿಮ ಏಷ್ಯಾ ಯುದ್ಧದಿಂದ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್‌ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್‌ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.

ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ಕ್ಕೆ ತಲುಪಲಿದೆ.

ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.

ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮನೆಗಳಿಗೆ ಎಲ್‌ಪಿಜಿ ಪೂರೈಕೆ ಸ್ಥಿರವಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದ್ದು, ವಿತರಕರಲ್ಲಿ ಯಾವುದೇ ಕೊರತೆ ಇಲ್ಲ ಮತ್ತು ಸಾಮಾನ್ಯ ವಿತರಣಾ ಕಾರ್ಯಾಚರಣೆಗಳು ಮುಂದುವರೆದಿವೆ.

ಪ್ಯಾನಿಕ್ ಬುಕಿಂಗ್‌ಗಳು ಕಡಿಮೆಯಾಗಿವೆ ಮತ್ತು ನಾಗರಿಕರು ಜನದಟ್ಟಣೆಯನ್ನು ತಪ್ಪಿಸಲು ಮತ್ತು ಮನೆ ವಿತರಣೆಯನ್ನು ಅವಲಂಬಿಸುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ