ಅತ್ಯಾಚಾರ ಆರೋಪಿಗೆ ಛತ್ರಿ ಹಿಡಿದಿರುವ ರೂಪಾಲಿ ಚಕಂಕರ್ 
ದೇಶ

ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆಯ ರಾಜೀನಾಮೆ ಸಿಎಂ ಫಡ್ನವೀಸ್ ಗೆ ರವಾನೆ: ಸುನೇತ್ರಾ ಪವಾರ್

ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಬಗ್ಗೆ ವಿರೋಧ ಪಕ್ಷಗಳಿಂದ ಟೀವ್ರ ಟೀಕೆಗೆ ಗುರಿಯಾದ ನಂತರ ಚಕಂಕರ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಂಬೈ: ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರ ರಾಜೀನಾಮೆಯನ್ನು ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕಳುಹಿಸಿರುವುದಾಗಿ ಆಡಳಿತಾರೂಢ ಎನ್‌ಸಿಪಿ ಮುಖ್ಯಸ್ಥೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಶನಿವಾರ ಹೇಳಿದ್ದಾರೆ.

ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಬಗ್ಗೆ ವಿರೋಧ ಪಕ್ಷಗಳಿಂದ ಟೀವ್ರ ಟೀಕೆಗೆ ಗುರಿಯಾದ ನಂತರ ಚಕಂಕರ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಎನ್‌ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್ ಅವರು ನಿನ್ನೆ ಸುನೇತ್ರಾ ಪವಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಅದಕ್ಕೂ ಮೊದಲು, ಚಕಂಕರ್ ಅವರು ಸಿಎಂ ಫಡ್ನವೀಸ್ ಅವರನ್ನು ಭೇಟಿಯಾಗಿದ್ದು, ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಪರಿಸ್ಥಿತಿ ಮತ್ತು ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಬಂಧನ, ಅವರ ವಿರುದ್ಧದ ಆರೋಪದ ಕುರಿತು ನಡೆಯುತ್ತಿರುವ ತನಿಖೆಯನ್ನು ಗಮನದಲ್ಲಿಟ್ಟುಕೊಂಡು ಚಕಂಕರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಸುನೇತ್ರಾ ಪವಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತನಿಖೆ ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮುಂದಿನ ಪ್ರಕ್ರಿಯೆಗಾಗಿ ನಾನು ಅವರ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ಕಳುಹಿಸಿದ್ದೇನೆ" ಎಂದು ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!