ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಮತ್ತೊಂದು ದಾಖಲೆ: 8,931 ದಿನಗಳ ಅಧಿಕಾರಾವಧಿ ಪೂರ್ಣ

ಈ ಮೈಲಿಗಲ್ಲು ಭಾರತೀಯ ರಾಜಕೀಯದಲ್ಲಿ ಅಪರೂಪದ ಸಾಧನೆಯಾಗಿದ್ದು, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ದಶಕಗಳ ನಿರಂತರ ಸಾರ್ವಜನಿಕ ಸೇವೆ ಹಾಗೂ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಭಾನುವಾರ (ಮಾರ್ಚ್ 22) ಭಾರತದ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಸರ್ಕಾರದ ಮುಖ್ಯಸ್ಥರಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅವರು ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಮೀರಿಸಿದ್ದಾರೆ.

ಚಾಮ್ಲಿಂಗ್ ಅವರು ಸಿಕ್ಕಿಂ ಮುಖ್ಯಮಂತ್ರಿ ಆಗಿ 8,930 ದಿನಗಳ ಕಾಲ ಸೇವೆ ಸಲ್ಲಿಸಿ ಈ ದಾಖಲೆಯನ್ನು ಹೊಂದಿದ್ದರು. ಈಗ 8,931 ದಿನಗಳನ್ನು ಪೂರ್ಣಗೊಳಿಸಿರುವ ಮೋದಿ ಅವರು, ಗುಜರಾತ್ ಮುಖ್ಯಮಂತ್ರಿ ಹಾಗೂ ಭಾರತದ ಪ್ರಧಾನಮಂತ್ರಿ ಹುದ್ದೆಗಳಲ್ಲಿ ಅವರ ಒಟ್ಟು ಅವಧಿಯನ್ನು ಸೇರಿಸಿ ಈ ಸಾಧನೆ ಮಾಡಿದ್ದಾರೆ.

ಈ ಮೈಲಿಗಲ್ಲು ಭಾರತೀಯ ರಾಜಕೀಯದಲ್ಲಿ ಅಪರೂಪದ ಸಾಧನೆಯಾಗಿದ್ದು, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ದಶಕಗಳ ನಿರಂತರ ಸಾರ್ವಜನಿಕ ಸೇವೆ ಹಾಗೂ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ.

ಮೋದಿ ಅವರ ರಾಜಕೀಯ ಪಯಣ

ನರೇಂದ್ರ ಮೋದಿ ಅವರ ರಾಜಕೀಯ ಜೀವನ ಹಲವು ಸಾಧನೆಗಳಿಂದ ಕೂಡಿದೆ. ಗುಜರಾತ್‌ನ ವದಾನಗರದಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಅವರು, ಬಾಲ್ಯದಲ್ಲಿ ರೈಲು ನಿಲ್ದಾಣದಲ್ಲಿ ತಮ್ಮ ತಂದೆಗೆ ಚಹಾ ಮಾರಾಟದಲ್ಲಿ ಸಹಾಯ ಮಾಡುತ್ತಿದ್ದರಂತೆ. ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಭಾರತೀಯ ಜನತಾ ಪಕ್ಷ (BJP) ಮೂಲಕ ಅವರು ರಾಜಕೀಯದಲ್ಲಿ ಮುಂದೆ ಬಂದರು.

2001ರಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಅವರು, ದಶಕಕ್ಕೂ ಹೆಚ್ಚು ಕಾಲ ಆ ಹುದ್ದೆಯಲ್ಲಿ ಮುಂದುವರಿದು 2014ರಲ್ಲಿ ಭಾರತದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದರು.

ಅವರು ಗುಜರಾತ್‌ನ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಗೌರವವನ್ನು ಹೊಂದಿದ್ದಾರೆ. ಜೊತೆಗೆ, ಮುಖ್ಯಮಂತ್ರಿ ಅನುಭವ ಹೊಂದಿದ ಪ್ರಧಾನಮಂತ್ರಿಗಳಲ್ಲಿ ಹೆಚ್ಚು ಅನುಭವ ಹೊಂದಿದವರು ಎಂಬ ವಿಶೇಷತೆ ಕೂಡ ಅವರದು. ಸ್ವಾತಂತ್ರ್ಯಾನಂತರ ಜನಿಸಿದ ಮೊದಲ ಪ್ರಧಾನಮಂತ್ರಿಯಾಗಿದ್ದಾರೆ.

2014ರಿಂದ ಅಧಿಕಾರದಲ್ಲಿರುವ ಮೋದಿ ಅವರು, 2014, 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ನಿರಂತರವಾಗಿ ಮೂರು ಬಾರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಇದರಿಂದ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿನ ದೀರ್ಘಕಾಲದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.

ಈ ಸಾಧನೆ ರಾಜಕೀಯ ದೀರ್ಘಾಯುಷ್ಯವನ್ನಷ್ಟೇ ಅಲ್ಲದೆ, ನಿರಂತರ ಸಾರ್ವಜನಿಕ ಬೆಂಬಲವನ್ನೂ ತೋರಿಸುತ್ತದೆ.

ಭಾರತದ ಎರಡನೇ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಮಂತ್ರಿ

2025ರ ಜುಲೈನಲ್ಲಿ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಮೀರಿಸಿ ನಿರಂತರ ಅವಧಿಯಲ್ಲಿ ಸೇವೆ ಸಲ್ಲಿಸಿದ ಎರಡನೇ ದೀರ್ಘಕಾಲದ ಪ್ರಧಾನಮಂತ್ರಿಯಾದರು. ಜುಲೈ 25, 2025ರ ವೇಳೆಗೆ ಅವರು 4,078 ದಿನಗಳನ್ನು ಪೂರ್ಣಗೊಳಿಸಿದ್ದರು.

ಇಂದಿರಾ ಗಾಂಧಿ ಅವರು 1966 ಜನವರಿ 24ರಿಂದ 1977 ಮಾರ್ಚ್ 24ರವರೆಗೆ 4,077 ದಿನಗಳ ಕಾಲ ನಿರಂತರವಾಗಿ ಪ್ರಧಾನಮಂತ್ರಿಯಾಗಿದ್ದರು.

ಪ್ರಧಾನಮಂತ್ರಿಯಾಗಿ ದೀರ್ಘಕಾಲ ನಿರಂತರ ಸೇವೆ ಸಲ್ಲಿಸಿದ ದಾಖಲೆ ಜವಾಹರಲಾಲ್ ನೆಹರು ಅವರದ್ದಾಗಿದೆ. ಗಮನಾರ್ಹವಾಗಿ, ಮೋದಿ ಅವರು ಕೂಡ ನೆಹರು ಅವರಂತೆ ಮೂರು ಬಾರಿ ನಿರಂತರವಾಗಿ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ.

ಮೋದಿ ಅವರು ಕಾಂಗ್ರೆಸ್ಸೇತರ ನಾಯಕರಾಗಿ ಎರಡು ಪೂರ್ಣ ಅವಧಿಗಳನ್ನು ಪೂರೈಸಿ, ಸ್ಪಷ್ಟ ಬಹುಮತದೊಂದಿಗೆ ಮರುಆಯ್ಕೆಯಾಗಿರುವ ಮೊದಲ ವ್ಯಕ್ತಿ. 1971ರ ಇಂದಿರಾ ಗಾಂಧಿ ನಂತರ ನಿರಂತರವಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಹಾಲಿ ಪ್ರಧಾನಮಂತ್ರಿಯಾಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ದಾಟಿ, ಈ ಮೈಲಿಗಲ್ಲು ತಲುಪಿದ ಮೊದಲ ಹಾಲಿ ವಿಶ್ವ ನಾಯಕರಾಗಿದ್ದಾರೆ.

ಪ್ರಧಾನಿ ಮೋದಿ ಅವರು 2014ರಲ್ಲಿ ಇನ್‌ಸ್ಟಾಗ್ರಾಮ್‌ಗೆ ಸೇರ್ಪಡೆಯಾಗಿದ್ದು, ಕಳೆದ ದಶಕದಲ್ಲಿ ಅವರ ಖಾತೆ ಜಾಗತಿಕ ನಾಯಕರಲ್ಲಿ ಅತ್ಯಂತ ಆಕರ್ಷಕ ಡಿಜಿಟಲ್ ವೇದಿಕೆಗಳಲ್ಲಿ ಒಂದಾಗಿ ರೂಪುಗೊಂಡಿದೆ.

ಪ್ರಸ್ತುತ, ಇನ್‌ಸ್ಟಾಗ್ರಾಮ್‌ನಲ್ಲಿ ಅವರಿಗೆ 101 ಮಿಲಿಯನ್‌ಕ್ಕಿಂತ ಹೆಚ್ಚು ಅನುಯಾಯಿಗಳಿದ್ದು, X ನಲ್ಲಿ 106 ಮಿಲಿಯನ್‌ಕ್ಕಿಂತ ಹೆಚ್ಚು ಅನುಯಾಯಿಗಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT