ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ online desk
ದೇಶ

Tamil Nadu Elections 2026: AIADMK ನೇತೃತ್ವದ NDA ಮೈತ್ರಿಕೂಟದ ಸೀಟು ಹಂಚಿಕೆ ಘೋಷಣೆ; ಬಿಜೆಪಿಗೆ ಎಷ್ಟು?

ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಪುರಚ್ಚಿ ತಲೈವರ್ ಎಂಜಿಆರ್ ಮಾಳಿಗೈನಲ್ಲಿ ಕಿಕ್ಕಿರಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ...

ಚೆನ್ನೈ: ಎಐಎಡಿಎಂಕೆ ತನ್ನ ಪ್ರಮುಖ ಎನ್‌ಡಿಎ ಪಾಲುದಾರ ಪಕ್ಷಗಳಾದ ಬಿಜೆಪಿ, ಪಿಎಂಕೆ ಮತ್ತು ಎಎಂಎಂಕೆ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಧಿಕೃತವಾಗಿ ಘೋಷಿಸಿವೆ.

ತಮಿಳುನಾಡಿನಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಏಪ್ರಿಲ್ 23 ರ ವಿಧಾನಸಭಾ ಚುನಾವಣೆಗೆ ಮೈತ್ರಿಕೂಟದ ಪ್ರಮುಖ ಪಕ್ಷಗಳಿಗೆ ಸೀಟು ಹಂಚಿಕೆ ವ್ಯವಸ್ಥೆಯನ್ನು ಸೋಮವಾರ ಅಂತಿಮಗೊಳಿಸಿದೆ. ದ್ರಾವಿಡ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ 27 ಸ್ಥಾನಗಳನ್ನು, ಪಟ್ಟಾಳಿ ಮಕ್ಕಳ್ ಕಚ್ಚಿಗೆ 18 ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂಗೆ 11 ಸ್ಥಾನಗಳನ್ನು ಹಂಚಿಕೆ ಮಾಡಿದೆ.

ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿ ಪುರಚ್ಚಿ ತಲೈವರ್ ಎಂಜಿಆರ್ ಮಾಳಿಗೈನಲ್ಲಿ ಕಿಕ್ಕಿರಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಇತರ ಮಿತ್ರಪಕ್ಷಗಳೊಂದಿಗೆ ಮಾತುಕತೆ ಮುಂದುವರೆದಿದ್ದು, ಸೋಮವಾರ ರಾತ್ರಿಯ ವೇಳೆಗೆ ಅದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.

ಮೈತ್ರಿ ಪಕ್ಷಗಳು ಸ್ಪರ್ಧಿಸುವ ಕ್ಷೇತ್ರಗಳ ಹೆಸರುಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು, ಸೀಟು ಹಂಚಿಕೆ ಮಾತುಕತೆಗಳು ಸೌಹಾರ್ದಯುತವಾಗಿದ್ದವು ಎಂದು ಹೇಳಿದ್ದಾರೆ.

ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದೆ. ಎನ್‌ಡಿಎಯ ಇತರ ಘಟಕಗಳಲ್ಲಿ ಮಾಜಿ ಕೇಂದ್ರ ಸಚಿವ ಜಿ.ಕೆ. ವಾಸನ್ ನೇತೃತ್ವದ ತಮಿಳು ಮಾನಿಲ ಕಾಂಗ್ರೆಸ್ (ಮೂಪನಾರ್) ಮತ್ತು ಐಜೆಕೆ ಸೇರಿವೆ.

ಎಐಎಡಿಎಂಕೆ ಸ್ಪರ್ಧಿಸುವ ಸ್ಥಾನಗಳ ಸಂಖ್ಯೆಯ ಬಗ್ಗೆ ಕೇಳಿದಾಗ, ಕೆಲವು ಪಕ್ಷಗಳೊಂದಿಗೆ ಮಾತುಕತೆ ಮುಂದುವರೆದಿದ್ದು, ಅದರ ತೀರ್ಮಾನದ ನಂತರ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಪಳನಿಸ್ವಾಮಿ ಹೇಳಿದರು. ಹಿರಿಯ ಬಿಜೆಪಿ ನಾಯಕ ಪಿಯೂಷ್ ಗೋಯಲ್ ಒಟ್ಟು 234 ವಿಧಾನಸಭಾ ಸ್ಥಾನಗಳಲ್ಲಿ ಕನಿಷ್ಠ 210 ವಿಧಾನಸಭಾ ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. "ಮೈತ್ರಿಕೂಟ ಗೆಲ್ಲುತ್ತದೆ ಮತ್ತು ಎಐಎಡಿಎಂಕೆ ಸರ್ಕಾರ ರಚಿಸುತ್ತದೆ" ಎಂದು ಅವರು ಪ್ರತಿಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್