ಸಂಗ್ರಹ ಚಿತ್ರ 
ದೇಶ

ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡುವಲ್ಲೇ ಜಮ್ಮು-ಕಾಶ್ಮೀರದಲ್ಲಿ ನಿಗೂಢ ಸ್ಫೋಟ..!

ಸಾಂಬಾ ಜಿಲ್ಲೆಯ ಘಗ್ವಾಲ್ ಪ್ರದೇಶದ ಗವಾಲಾ ತಲಾಬ್ ಗ್ರಾಮದಲ್ಲಿ, ಮಾಜಿ ಸರ್ಪಂಚ್ ಜೈ ರಾಮ್ ಶರ್ಮಾ ಅವರ ಮನೆಯ ಹೊರಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ.

ಜಮ್ಮು: ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ತೀವ್ರ ಕಾರ್ಯಾಚರಣೆ ನಡೆಸುತ್ತಿರುವ ನಡುವಲ್ಲೇ ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಲ್ಲಿ ಸೋಮವಾರ ಮುಂಜಾನೆ ನಿಗೂಡ ಸ್ಫೋಟ ಸಂಭವಿಸಿದ್ದು, ಇದರ ಬೆನ್ನಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸಾಂಬಾ ಜಿಲ್ಲೆಯ ಘಗ್ವಾಲ್ ಪ್ರದೇಶದ ಗವಾಲಾ ತಲಾಬ್ ಗ್ರಾಮದಲ್ಲಿ, ಮಾಜಿ ಸರ್ಪಂಚ್ ಜೈ ರಾಮ್ ಶರ್ಮಾ ಅವರ ಮನೆಯ ಹೊರಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ.

ಅಂತರರಾಷ್ಟ್ರೀಯ ಗಡಿಗೆ ಸುಮಾರು 10 ಕಿಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ತಡ ರಾತ್ರಿ ಸುಮಾರು 2 ಗಂಟೆಗೆ ಸ್ಫೋಟ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಪರಿಣಾಮ ಮನೆಯ ಮುಖ್ಯ ಗೇಟ್ ಸಂಪೂರ್ಣವಾಗಿ ಧ್ವಂಸವಾಗಿದ್ದು, ಸುತ್ತಲಿನ ಕಾಂಪೌಂಡ್ ಗೋಡೆಯ ಭಾಗವೂ ಹಾನಿಗೊಂಡಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು-ನೋವುಗಲು ಸಂಭವಿಸಿಲ್ಲ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಫೋಟದ ಮೂಲ ಮತ್ತು ಕಾರಣ ಪತ್ತೆಹಚ್ಚಲು ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ತನಿಖೆ ಮುಂದುವರಿಸಿದ್ದಾರೆ. ಸ್ಫೋಟದ ಹಿಂದೆ ಇರುವ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಬೆನ್ನಲ್ಲೇ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel