ಚಿಕನ್ ಬಿರಿಯಾನಿ ತಿಂದ ಆರೋಪಿಗಳು 
ದೇಶ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ: ಚಿಕನ್ ಬಿರಿಯಾನಿ ಸೇವನೆ; 14 ಆರೋಪಿಗಳಿಗೆ ಜಾಮೀನು ನಿರಾಕರಣೆ!

ಎಲ್ಲಾ 14 ಮಂದಿಯ ವಿರುದ್ಧ ಪವಿತ್ರ ಸ್ಥಳ ಅಪವಿತ್ರ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಮತ್ತು ಸಾರ್ವಜನಿಕರಿಗೆ ತೊಂದರೆ, ಜಲಮಾಲಿನ್ಯಕ್ಕೆ ಕಾರಣವಾದ ಆರೋಪಗಳನ್ನು ಮಾಡಲಾಗಿದೆ.

ವಾರಣಾಸಿ: ಪವಿತ್ರ ಗಂಗಾ ನದಿಯಲ್ಲಿ ದೋಣಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ನಡೆಸಿ, ಚಿಕನ್ ಬಿರಿಯಾನಿ ತಿಂದ ಆರೋಪದ ಮೇಲೆ ವಾರದ ಹಿಂದೆ ಬಂಧಿತರಾಗಿದ್ದ 14 ಮಂದಿಯ ಜಾಮೀನು ಅರ್ಜಿಯನ್ನು ವಾರಣಾಸಿಯ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.

ಎಲ್ಲಾ 14 ಮಂದಿಯ ವಿರುದ್ಧ ಪವಿತ್ರ ಸ್ಥಳ ಅಪವಿತ್ರ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಮತ್ತು ಸಾರ್ವಜನಿಕರಿಗೆ ತೊಂದರೆ, ಜಲಮಾಲಿನ್ಯಕ್ಕೆ ಕಾರಣವಾದ ಆರೋಪಗಳನ್ನು ಮಾಡಲಾಗಿದೆ.

ಅಲ್ಲದೇ ಬೋಟ್ ಅನ್ನು ಬಲವಂತವಾಗಿ ವಶಪಡಿಸಿಕೊಂಡ ಬಗ್ಗೆಯೂ ಪೊಲೀಸರು ಆರೋಪದಲ್ಲಿ ಸೇರಿಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಮುಖ್ಯಸ್ಥರಾಗಿರುವ ದೂರುದಾರ ರಜತ್ ಜೈಸ್ವಾಲ್ ಅವರ ಪರ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಹೇಳಿದ್ದಾರೆ.

ಈ ಆರೋಪಗಳು ಗಂಭೀರ ಹಾಗೂ ಜಾಮೀನು ರಹಿತವಾಗಿವೆ ಎಂಬುದನ್ನು ಪರಿಗಣಿಸಿದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಯಾದವ್, ಈ ಹಂತದಲ್ಲಿ ಜಾಮೀನು ನೀಡಲು ಸಾಕಷ್ಟು ಆಧಾರಗಳಿಲ್ಲ ಎಂದು ಆದೇಶ ಹೊರಡಿಸಿರುವುದಾಗಿ ತ್ರಿಪಾಠಿ ಹೇಳಿದರು.

ಆರೋಪಿಗಳ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಆರೋಪಿಗಳು ಗಂಭೀರ ಅಪರಾಧ ಮಾಡಿದ್ದು, ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಆರೋಪಿಗಳಿಗೆ ಜಾಮೀನು ನೀಡುವುದರಿಂದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಬಹುದು ಎಂದು ಅವರು ವಾದಿಸಿರುವುದಾಗಿ ತ್ರಿಪಾಠಿ ಹೇಳಿದರು.

ಘಟನೆಯ ವಿಡಿಯೋ ಕಳೆದ ಸೋಮವಾರ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ 14 ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಜೈಸ್ವಾಲ್ ಅದೇ ದಿನ ಲಿಖಿತ ದೂರನ್ನು ದಾಖಲಿಸಿದ್ದಾರೆ. ನ್ಯಾಯಾಲಯ ಗುರುವಾರ 14 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?