ಹೆಚ್ ಡಿ ದೇವೇಗೌಡ  
ದೇಶ

HD Devegowda: ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ; ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲೇ ದೇವೇಗೌಡರ ತಿರುಗೇಟು

ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ ಎಂದರು.

ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆ ಆದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭೆಯಲ್ಲಿಯೇ ನಿನ್ನೆ ಸೋಮವಾರ ತಿರುಗೇಟು ಕೊಟ್ಟಿದ್ದಾರೆ.

ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದರು.

2014ರಲ್ಲಿಯೇ ಬಿಜೆಪಿ, ಮೋದಿ ಜೊತೆಗೆ ನಮ್ಮ ಮೈತ್ರಿ

ನನ್ನ ಮತ್ತು ನರೇಂದ್ರ ಮೋದಿ ಅವರ ನಡುವಿನ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದೆ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಮೋದಿ ಅವರು ಹಾಗೆ ಮಾಡಬೇಡಿ ಎಂದು ತಡೆದರು. ನಾನು ಅವತ್ತಿನ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ ಎಂದು ದೇವೇಗೌಡರು ಹೇಳಿದರು.

ಆ ಘಟನೆ ನಡೆದ ನಂತರ ನಾನು ಅವರ ಮೈತ್ರಿಯಲ್ಲಿ ಇದ್ದೇನೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಸದೃಢ ನಾಯಕತ್ವ ನೀಡಿದ್ದಾರೆ. ಜನರು ಕೂಡ ಅವರ ಮೇಲೆ ಅಪರಿಮಿತ ವಿಶ್ವಾಸ ಇರಿಸಿ ಸತತವಾಗಿ ಆಯ್ಕೆ ಮಾಡುತ್ತಾ ಬರುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

2018ರಲ್ಲಿ ಕಾಂಗ್ರೆಸ್ ಪಕ್ಷದ ಜತೆ ನಮ್ಮ ಪಕ್ಷ ಮೈತ್ರಿ ಹೊಂದಿದ್ದ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಸಿಎಂ ಆಗದಂತೆ ತಡೆಯಿತು. ಆಗ ಮತ್ತೆ ಮನೆ ಬಾಗಿಲಿಗೆ ಬಂದು ಮೈತ್ರಿ ಹಸ್ತ ಚಾಚಿದ ಕಾಂಗ್ರೆಸ್, ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವಂತೆ ಒತ್ತಡ ಹೇರಿತು. ಮತ್ತೆ ಒಂದೇ ವರ್ಷದಲ್ಲಿ ಕಾಂಗ್ರೆಸ್ ನಮಗೆ ದ್ರೋಹ ಬಗೆಯಿತು. ಈ ಎಲ್ಲಾ ವಿವರಗಳು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೊತ್ತಿವೆ ಎಂದರು.

ಕಾಂಗ್ರೆಸ್ ನನಗೆ ಟಿಕೆಟ್ ನಿರಾಕರಿಸಿತ್ತು

1962ರಲ್ಲಿ ನಾನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ಕೊಡುವುದಾಗಿ ಹೇಳಿತ್ತು. ನೀಲಂ ಸಂಜೀವರೆಡ್ಡಿ ಅವತ್ತಿನ ಎಐಸಿಸಿ ಅಧ್ಯಕ್ಷರಾಗಿದ್ದರು. ಆದರೆ, ನನಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತು ಎಂದು ಸ್ಮರಿಸಿದರು.

ಕಾಂಗ್ರೆಸ್ ಪಕ್ಷದಿಂದ ದ್ರೋಹ

ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ, ಅನೇಕ ಬಾರಿ ದ್ರೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನು ಮರೆಮಾಚಲು ಖರ್ಗೆ ಅವರು ನನ್ನ ವಿಷಯ ಎಳೆದು ತಂದಿದ್ದಾರೆ. ಅದಕ್ಕೆ ನಾನು ಉತ್ತರ ನೀಡಬೇಕಿದೆ, ಜನರಿಗೆ ಸತ್ಯ ವಿಚಾರ ಗೊತ್ತಾಗಬೇಕು ಎಂದರು.

ಈ ಸಂದರ್ಭದಲ್ಲಿ ತಮ್ಮ ಕಾಲದ ಕರ್ನಾಟಕ ರಾಜ್ಯದ ರಾಜಕಾರಣವನ್ನು ಮೆಲುಕು ಹಾಕಿದ ಮಾಜಿ ಪ್ರಧಾನಿಗಳು, ನಿಜಲಿಂಗಪ್ಪ, ದೇವರಾಜ ಅರಸು, ಬಂಗಾರಪ್ಪ ಅವರಿಗೆ ಏನಾಯಿತು ಎಂಬುದು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಗೊತ್ತಿದೆ. ಅವರು ಹೇಗೆ ಅಧಿಕಾರ ಕಳೆದುಕೊಂಡರು ಎಂಬುದನ್ನು ಖರ್ಗೆ ಅವರು ಹೇಳಬೇಕಾಗುತ್ತದೆ. ಅವರೆಲ್ಲರೂ ಅಧಿಕಾರ ಕಳೆದುಕೊಂಡಿದ್ದಕ್ಕೆ ನಾವು ಸಾಕ್ಷಿಗಳಾಗಿದ್ದೆವು ಎಂದು ಟೀಕಾ ಪ್ರಹಾರ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕೆಂದು ನಾವೆಲ್ಲರೂ ಆಶಿಸಿದ್ದೆವು. ಆದರೆ, ಅವರ ಸ್ವಂತ ಪಕ್ಷವೇ ಅವರನ್ನು ಸಿಎಂ ಆಗಲು ಬಿಡಲಿಲ್ಲ ಎಂದರು.

ಪ್ರಧಾನಿ ಮೋದಿಗೆ ವಿಶೇಷ ಮನವಿ

ರಾಜ್ಯಸಭೆಯಲ್ಲಿ ಕರ್ನಾಟಕದ ಬಗ್ಗೆ ಪ್ರಸ್ತಾಪಿಸಿದ ಮಾಜಿ ಪ್ರಧಾನ ಮಂತ್ರಿಗಳು, ಪ್ರಧಾನಿ ಮೋದಿಯವರೇ ನೀವು ಕರ್ನಾಟಕದ ಈಗಿನ ಕಾಂಗ್ರೆಸ್ ಸರ್ಕಾದ ಬಗ್ಗೆ ಆತಂಕ ಹೊಂದಬೇಡಿ, ಹೆಚ್ ಎಂಟಿ ಜಮೀನು ಖಾಲಿಯಾಗಿ ಬಿದ್ದಿದೆ, ಕೈಗಾರಿಕೆಗಳ ಪುನಶ್ಚೇತನವಾಗಬೇಕಿದೆ. ಸರ್ ಎಂ ವಿಶ್ವೇಶ್ವರಯ್ಯನವರು ಭದ್ರಾವತಿ ಉಕ್ಕಿನ ಕಾರ್ಖಾನೆಯನ್ನು ಹುಟ್ಟುಹಾಕಿದರು. ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಿ. ಪ್ರಧಾನ ಮಂತ್ರಿಯವರೇ ಕರ್ನಾಟಕದ ಒಳಿತಿಗೆ ಏನಾದರೂ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ನೂರಾರು ಮಂದಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

2028ಕ್ಕೆ ರಾಜ್ಯದಲ್ಲಿ ಹಿಂದೂ ಸರ್ಕಾರ: ಪೊಲೀಸರ ಕೈಗೆ AK-47 ಕೊಟ್ಟು, ಪಾಕಿಸ್ತಾನ್ ಜಿಂದಾಬಾದ್ ಅಂದವರ ಬಾಯಿಗೆ ಗುಂಡಿಟ್ಟು ಹೊಡೆಸ್ತೀವಿ; ಯತ್ನಾಳ್

'ಐದು ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್

SCROLL FOR NEXT