ಹೊತ್ತಿ ಉರಿದ ಬಸ್ ಮತ್ತು ಟಿಪ್ಪರ್ ಲಾರಿ 
ದೇಶ

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ

ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ.

ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಸ್‌ನಲ್ಲಿ ಹಿಂಭಾಗ ಕುಳಿತಿದ್ದ ಹಲವರು ಸಾವನ್ನಪ್ಪಿದ್ದಾರೆ. ಮುಂಭಾಗ ಕುಳಿತಿದ್ದ ಸುಮಾರು 10 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಕಪುರಂ ಶಾಸಕ ಕಂದುಲ ನಾರಾಯಣ ರೆಡ್ಡಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಇನ್ನೂ ಘಟನೆ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತ ಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಘಟನೆಯ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು, ಭೀಕರ ದೃಶ್ಯ!

ಮುಡಾ ಪ್ರಕರಣ: ಮತ್ತೆ ಸಿಎಂ ಗೆ ಸಂಕಷ್ಟ, ಬಿ'ರಿಪೋರ್ಟ್ ಸಂಬಂಧ ಸಿದ್ದರಾಮಯ್ಯ, ಪತ್ನಿ ಗೆ ಹೈಕೋರ್ಟ್ ನೋಟಿಸ್ ಜಾರಿ

ನನ್ನ ಬಿಡಪ್ಪ, ನಿನಗೆ ತಾಕತ್ತಿದ್ದರೆ ಮೋದಿಗೆ ಥೂ ಅನ್ನು ನೋಡೋಣ: ಸುನೀಲ್ ಕುಮಾರ್‌ಗೆ ಸಿದ್ದರಾಮಯ್ಯ ಸವಾಲು, Video!

SCROLL FOR NEXT