ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಜಿಮ್ ಟ್ರೈನರ್ ಶಹಜಾದ್

ಉತ್ತರ ಪ್ರದೇಶದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರನೊಬ್ಬ ಪ್ರೋಟೀನ್ ಶೇಕ್‌ನಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಸಹಾರನ್‌ಪುರ: ಉತ್ತರ ಪ್ರದೇಶದ ಸಹರಣಪುರ ಜಿಲ್ಲೆಯ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರನೊಬ್ಬ ಪ್ರೋಟೀನ್ ಶೇಕ್‌ನಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ 21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿ ಮತ್ತು ಆತನ ಸಹಚರನನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಬಿಹಾರಿಗಢ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆ ಪ್ರದೇಶದಲ್ಲಿದ್ದ ಜಿಮ್ ಗೆ ತೆರಳಿದ್ದಾಗ ತರಬೇತುದಾರನಾಗಿದ್ದ ಶಹಜಾದ್ ಪರಿಚಯವಾಗಿತ್ತು.

ಶಹಜಾದ್ ನಂತರ ಸಂತ್ರಸ್ತೆಯನ್ನು ಡೆಹ್ರಾಡೂನ್‌ಗೆ ಕರೆದೊಯ್ದು ಪ್ರೋಟೀನ್ ಶೇಕ್‌ನಲ್ಲಿ ನಿದ್ರಾಜನಕ ಬೆರೆಸಿ, ಮೂರ್ಛೆ ಹೋಗುವಂತೆ ಮಾಡಿ, ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಾಗರ್ ಜೈನ್ ತಿಳಿಸಿದ್ದಾರೆ. ಶಹಜಾದ್‌ಗೆ ಸಹಾಯ ಮಾಡುತ್ತಿದ್ದ ಸಹಚರನ ವಿರುದ್ಧವು ಸಂತ್ರಸ್ತೆ ಆರೋಪಿಸಿದ್ದಾರೆ ಎಂದು ಅವರು ಹೇಳಿದರು.

ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ಬಿಹಾರಿಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಶಹಜಾದ್ (28) ಮತ್ತು ಮುಕರ್ರಂ (27) ಅವರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇಬ್ಬರೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

SCROLL FOR NEXT