ಕೆಪಿ ಶರ್ಮಾ ಓಲಿ 
ದೇಶ

ಬಾಲೇಂದ್ರ ಶಾ ಪದಗ್ರಹಣದ ಬೆನ್ನಲ್ಲೇ ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಓಲಿ ಅರೆಸ್ಟ್‌

ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್‌ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ,

ಬಾಲೇಂದ್ರ ಶಾ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಓಲಿಯನ್ನು ನೇಪಾಳ ಪೊಲೀಸರು ಭಕ್ತಪುರದ ಗುಂಡುವಿನಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದರು.

ವರದಿಗಳ ಪ್ರಕಾರ, ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್‌ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್‌ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚಂದ್ರ ಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.

ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್‌ ಓಂ ಅಧಿಕಾರಿ ತಿಳಿಸಿದ್ದಾರೆ.

ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್‌ ಗುರುಂಗ್‌, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್‌ ಲೇಖಕ್‌ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ.

ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆದ “ಜನರಲ್-ಝಡ್” ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

2028ಕ್ಕೆ 75-80 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು, ಅಧಿಕಾರಕ್ಕೆ- ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ! ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

ಬೆಂಗಳೂರು: ಮಾಜಿ ಉಪ ಮೇಯರ್ ಸೊಸೆಯ ಕಾರನ್ನು ತಡೆದು ಕಿರುಕುಳ, ಆಕೆಯ ಪತಿ ಮೇಲೂ ಹಲ್ಲೆ!

ಬೇಲ್ ಫಸ್ಟ್ ಲುಕ್ ರಿಲೀಸ್ : ಸಾಲ್ಟ್ ಅಂಡ್‌ ಪೆಪ್ಪರ್ ಲುಕ್ ಶಿವಣ್ಣ, ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ರಿಲೀಸ್ ! Video

SCROLL FOR NEXT