ಅಶೋಕ್ ಖರತ್‌ 
ದೇಶ

Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಪೊಲೀಸ್ ಕಸ್ಟಡಿ ಏಪ್ರಿಲ್ 1 ರವರೆಗೆ ವಿಸ್ತರಣೆ

ಆರೋಪಿ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನಾಸಿಕ್‌: ನಾಸಿಕ್‌ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ನಾಸಿಕ್‌ ನ್ಯಾಯಾಲಯ ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.

ಆರೋಪಿ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆಯ ಸಮಯದಲ್ಲಿ, ಪಬ್ಲಿಕ್ ಪ್ರಾಸಿಕ್ಯೂಟರ್ ಶೈಲೇಂದ್ರ ಬಾಗ್ಡೆ ಅವರು ಪ್ರಕರಣದ ತನಿಖೆ ಇನ್ನೂ ಮುಂದುವರೆದಿದ್ದು, ಆರೋಪಿ ಸಹಕರಿಸುತ್ತಿಲ್ಲ. ಹೀಗಾಗಿ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.

ಈ ಮಧ್ಯೆ, ಅಶೋಕ್ ಖರತ್ ವಿರುದ್ಧದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ), ದೂರವಾಣಿ ಮೂಲಕ 100ಕ್ಕೂ ಹೆಚ್ಚು ಮಹಿಳೆಯರಿಂದ ದೂರುಗಳನ್ನು ಸ್ವೀಕರಿಸಿದೆ ಎಂದು ಪಲೀಸರು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎರಡು ಕೇಸ್ ದಾಖಲಿಸಲಾಗಿದ್ದು, ಇದರೊಂದಿಗೆ, ನಗರದ ಸರ್ಕಾರವಾಡಾ ಪೊಲೀಸ್ ಠಾಣೆಯಲ್ಲಿ ಖರತ್ ವಿರುದ್ಧ ಎಂಟು ಲೈಂಗಿಕ ದೌರ್ಜನ್ಯ ಮತ್ತು ಎರಡು ವಂಚನೆ ಆರೋಪ ಸೇರಿದಂತೆ ಒಟ್ಟು ಹತ್ತು ಎಫ್‌ಐಆರ್‌ಗಳು ದಾಖಲಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT