ಬಿಹಾರ ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ: MLC ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ! ಮುಂದಿನ ಸಿಎಂ ಯಾರು?

ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು MLC ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಿಹಾರದ ಸುದೀರ್ಘ ಅವಧಿಯ ಸಿಎಂ ಆಗಿರುವ ನಿತೀಶ್ ಕುಮಾರ್ ಕಳೆದ ತಿಂಗಳು ರಾಜ್ಯಸಭೆಗೆ ನೇಮಕವಾಗುವ ಮೂಲಕ ಸಿಎಂ ಸ್ಥಾನವನ್ನು ತ್ಯಜಿಸುವ ಸುಳಿವು ನೀಡಿದ್ದರು.

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಮರಳಲು ಸಜ್ಜಾಗಿರುವ ನಿತೀಶ್ ಕುಮಾರ್ ಅವರು ಎಷ್ಟು ದಿನಗಳವರೆಗೆ ಮುಂದುವರೆಯಲಿದ್ದಾರೆ ಎಂಬ ಬಗ್ಗೆ ಅನುಮಾನಗಳು ಮುಂದುವರೆದಿತ್ತು.

ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಮಧ್ಯೆ ಜನತಾದಳ (ಯುನೈಟೆಡ್) ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಜೆಡಿಯು ನಾಯಕ ಅನಿಲ್ ಹೆಗ್ಡೆ ಅವರು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ವಿವರಿಸಿದ ನಂತರ ಈ ವಿಷಯ ತಿಳಿಸಿದರು.

ನಾಮಪತ್ರ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿತ್ತು. ಮಾರ್ಚ್ 23 ರಂದು ಪರಿಶೀಲನೆ ನಡೆಸಲಾಗಿದ್ದು, ನಾಮಪತ್ರ ಹಿಂಪಡೆಯಲು ಇಂದು ಬೆಳಗ್ಗೆ 11 ಗಂಟೆಗೆ ಗಡುವು ನೀಡಲಾಗಿತ್ತು. ಅಂತಿಮವಾಗಿ ನಿತೀಶ್ ಕುಮಾರ್ ಅವರೇ ಸ್ಪರ್ಧೆಯಲ್ಲಿ ಇರುವುದರಿಂದ ಅವಿರೋಧವಾಗಿ ಆಯ್ಕೆಯಾದರು ಎಂದು ಅವರು ಪ್ರಕಟಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!