ನಳಂದ: ಬಿಹಾರದ ನಳಂದ ಜಿಲ್ಲೆಯ ಶೀತಲ ದೇವಸ್ಥಾನದಲ್ಲಿ ಭಕ್ತರ ವಿಪರೀತ ದಟ್ಟಣೆಯಿಂದ ಉಂಟಾದ ಮಂಗಳವಾರ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 8 ಮಹಿಳಾ ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.
ಧಾರ್ಮಿಕ ಸಭೆಯ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅತಿಯಾದ ಜನಸಂದಣಿ ಮತ್ತು ಕಾಲ್ತುಳಿತದಂತಹ ಪರಿಸ್ಥಿತಿಯಿಂದ 8 ಮಹಿಳೆಯರು ನೆಲಕ್ಕೆ ಬಿದ್ದು ಅಪಚ್ಚಿಯಾಗಿದ್ದಾರೆ. ಸ್ಥಳೀಯ ಆಡಳಿತದಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಇದರಿಂದಾಗಿ ಜನದಟ್ಟಣೆ ಉಂಟಾಗಿದ್ದು, ಬ್ಯಾರಿಕೇಡ್ ಗಳು ಮುರಿದ್ದು, ಒಬ್ಬರ ಮೇಲೆ ಒಬ್ಬರಂತೆ ಭಕ್ತರು ಕೆಳಗೆ ಬಿದ್ದಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಅಲ್ಲಿ ಯಾವುದೇ ಪೊಲೀಸರು ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಹಾರ ಮೇಲ್ವಿಚಾರಣೆ ನಡೆಸುತ್ತಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.