ಅಪ್ರಾಪ್ತ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ 
ದೇಶ

ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳ: ಆಟೋದಲ್ಲಿ ಕುಳಿತಿದ್ದ 4 ವರ್ಷದ ಮಗುವಿನ ಕಾಲಿಡಿದು ರಸ್ತೆಗೆ ಬಡಿದ ಕಿರಾತಕ!

ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ಪವಾರ್ ಬಾಲಕನನ್ನು ನೆಲಕ್ಕೆ ಬಡಿದಿದ್ದಾನೆ. ನಂತರ ಕಬ್ಬಿಣದ ರಾಡ್‌ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ.

ಮುಂಬೈ: ಮಹಾರಾಷ್ಟ್ರದ ಮುಂಬೈಗೆ ಹೊಂದಿಕೊಂಡ ಪ್ರದೇಶವಾದ ಇಲ್ಲಿ ವಸೈನಲ್ಲಿ ಕ್ಷುಲ್ಲಕ ವಿಷಯಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯೊಂದಿಗೆ ಜಗಳವಾಡಿದ ನಂತರ ಆತನ ನಾಲ್ಕು ವರ್ಷದ ಮಗನನ್ನು ಕಾಲಿಡಿದು ಬಟ್ಟೆ ಹೊಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ನಡೆದಿದೆ.

ಈ ಕ್ರೂರ ಘಟನೆ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಹಳದಿ ಟೀ ಶರ್ಟ್ ಧರಿಸಿದ ವಿಘ್ನೇಶ್ ಎಂದು ಗುರುತಿಸಲಾದ ಬಾಲಕ ನಿಲ್ಲಿಸಿದ್ದ ಆಟೋರಿಕ್ಷಾದಲ್ಲಿ ಕುಳಿತು ಇತರ ಮಕ್ಕಳೊಂದಿಗೆ ಆಟವಾಡುತ್ತಿರುವುದನ್ನು ಕಾಣಬಹುದು. ಆ ಮಗುವಿನ ತಂದೆಯೊಂದಿಗೆ ಸಣ್ಣ ವಿಷಯಕ್ಕೆ ಜಗಳವಾಡಿದ ಆರೋಪಿ ಸಂದೀಪ್ ಪವಾರ್, ವಿಘ್ನೇಶ್ ಬಳಿಗೆ ನಡೆದು ಅವನ ಕಾಲುಗಳನ್ನು ಹಿಡಿದು ವಾಹನದಿಂದ ಹೊರಗೆಳೆದಿದ್ದಾನೆ.

ಆ ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ನಂತರ ಪವಾರ್ ಬಾಲಕನನ್ನು ನೆಲಕ್ಕೆ ಅಪ್ಪಳಿಸಿದ್ದಾನೆ. ನಂತರ ಕಬ್ಬಿಣದ ರಾಡ್‌ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಮತ್ತೊಮ್ಮೆ ಬಾಲಕನನ್ನು ರಸ್ತೆ ಮೇಲೆ ಎಸೆದಿದ್ದಾನೆ.

ಬಾಲಕನನ್ನು ಮೀರಾ ರಸ್ತೆಯಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಆತನಿಗೆ ತೀವ್ರ ನಿಗಾ ಘಟಕದಲ್ಲಿಟ್ಟು (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ಪ್ರದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಿವಾಸಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್