ನಟ ವಿಜಯ್  
ದೇಶ

Tamilnadu: ರಾಜಕೀಯ ದ್ವೇಷ; ಟಿವಿಕೆ ಪ್ರಚಾರ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ!

ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.

ಶ್ರೀರಂಗಂ: ತಮಿಳುನಾಡು ವಿಧಾನಸಭಾ ಚುನಾವಣೆ ಮುಗಿದಿದ್ದರೂ ರಾಜಕೀಯ ದ್ವೇಷ ಹೊಗೆಯಾಡುತ್ತಲೇ ಇದೆ.

ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.

ಶ್ರೀರಂಗಂ ಕ್ಷೇತ್ರದ ಪಕ್ಷದ ಚುನಾವಣಾ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದ ಪ್ರವೇಶದ್ವಾರದಲ್ಲಿ ನೆರಳು ನೀಡುವ ಹುಲ್ಲಿನ ಛಾವಣಿಗೆ ಬೆಂಕಿ ತಗುಲಿದೆ. ಹೆಚ್ಚಿನ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 23 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 4 ರಂದು ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಇವರೇ ಅಪರಾಧಿಗಳು ಎನ್ನಲಾಗುತ್ತಿದೆ. ಆದಾಗ್ಯೂ, ವೀಡಿಯೊ ದೃಶ್ಯಾವಳಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿವಿಕೆ ನೀಡಿದ ದೂರಿನ ಆಧಾರದ ಮೇಲೆ, ಪೆಟ್ಟೈವೈತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!