ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಿವಾಸಿ ಕಟ್ಟಡದಲ್ಲಿ ಅಗ್ನಿ ಅವಘಡ  
ದೇಶ

ದೆಹಲಿ: ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಜೀವ ದಹನ; Video

ಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಇಂದು ಭಾನುವಾರ ಬೆಳಗಿನ ಜಾವ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಿವಾಸಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಎಸಿ ಸ್ಫೋಟವಾಗಿ ದುರ್ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಲಾಗಿದ್ದು, ರಾತ್ರಿ ಮಲಗಿದ್ದವರು ನಸುಕಿನ ಜಾವ ಕಣ್ಣುಬಿಡಲೇ ಇಲ್ಲ, ಸಜೀವ ದಹನವಾಗಿದ್ದಾರೆ.

ಪೊಲೀಸರ ಪ್ರಕಾರ, ಕಟ್ಟಡದ ಎರಡನೇ, ಮೂರನೇ ಮತ್ತು ನಾಲ್ಕನೇ ಮಹಡಿಗಳಲ್ಲಿರುವ ಫ್ಲ್ಯಾಟ್‌ಗಳಲ್ಲಿ ಬೆಂಕಿ ಆವರಿಸಿಕೊಂಡಿದ್ದು, ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಯಿತು.

ಅಗ್ನಿಶಾಮಕ ಕಾರ್ಯಾಚರಣೆಯ ವೇಳೆ ಸುಮಾರು 10 ರಿಂದ 15 ಮಂದಿಯನ್ನು ಸ್ಥಳದಿಂದ ರಕ್ಷಿಸಲಾಗಿದೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಇಬ್ಬರನ್ನು ಗುರು ತೆಗ್ ಬಹಾದೂರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟು 12 ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ಬಳಸಲಾಗಿದ್ದು, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA), ಸಂಚಾರ ಪೊಲೀಸ್ ಮತ್ತು ಸ್ಥಳೀಯ ಪೊಲೀಸರು ರಕ್ಷಣಾ ಮತ್ತು ಸ್ಥಳಾಂತರ ಕಾರ್ಯದಲ್ಲಿ ಸಹಕರಿಸಿದರು.

ಕೆಲವು ಗಂಟೆಗಳ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ಕಾಣಿಸಿಕೊಂಡ ಕಾರಣವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಹಂತದ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?