ಗೌರವ್ ಗೊಗೊಯ್ 
ದೇಶ

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಗೆ ಹೀನಾಯ ಸೋಲು; ಬಿಜೆಪಿ ಗೆಲುವಿನ ಅಂತರ ಎಷ್ಟು ಗೊತ್ತಾ?

ಅಸ್ಸಾಂನಲ್ಲಿ ಬಿಜೆಪಿ ಒಟ್ಟು 98 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೇವಲ 26 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಅಸ್ಸಾಂ ವಿಧಾನಸಭೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿ, ಸತತ ಮೂರನೇ ಬಾರಿಗೆ ಅಧಾರಕ್ಕೇರುತ್ತಿದೆ.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಅವರು ಜೋರ್ಹತ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಹಿತೇಂದ್ರನಾಥ್ ಗೋಸ್ವಾಮಿ ವಿರುದ್ಧ 23,182 ಮತಗಳಿಂದ ಸೋತಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಅಸ್ಸಾಂ ಶಿಕ್ಷಣ ಸಚಿವ ರನೋಜ್ ಪೆಗು ಧೇಮಾಜಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಸೈಲೆನ್ ಸೋನೋವಾಲ್ ವಿರುದ್ಧ 32,229 ಮತಗಳ ಭಾರೀ ಅಂತರದಿಂದ ಗೆದ್ದಿದ್ದಾರೆ.

ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ಅಸ್ಸಾಂ ಕ್ಯಾಬಿನೆಟ್ ಸಚಿವ ಮತ್ತು ಬಿಪಿಎಫ್ ನಾಯಕ ಚರಣ್ ಬೊರೊ ತಮ್ಮ ಮಜ್ಬತ್ ಕ್ಷೇತ್ರವನ್ನು ಉಳಿಸಿಕೊಂಡಿದ್ದು, ಪ್ರತಿಸ್ಪರ್ಧಿ ಜೆಎಂಎಂ ಅಭ್ಯರ್ಥಿಯನ್ನು 55,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.

ಅಸ್ಸಾಂನಲ್ಲಿ ಬಿಜೆಪಿ ಒಟ್ಟು 98 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೇವಲ 26 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'