ವಿಜಯ್‌ ಹಾಗೂ ಶಬರಿನಾಥನ್ 
ದೇಶ

ಕಾರು ಚಾಲಕನ ಪುತ್ರನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬಂದ ವಿಜಯ್‌; ಡ್ರೈವರ್ ಮಗ ಈಗ MLA! ಹೃದಯಸ್ಪರ್ಶಿ Video ನೋಡಿ

ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್ ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, ವಿರುಗಂಬಕ್ಕಂ ಕ್ಷೇತ್ರದಿಂದ ಕಣಕ್ಕೀಳಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ.

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ ಪುತ್ರನಿಗೆ ಅದೃಷ್ಟ ಖುಲಾಯಿಸಿದೆ.

ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್ ಶಬರಿನಾಥನ್ ಅವರಿಗೆ ಟಿವಿಕೆ ಟಿಕೆಟ್ ನೀಡಿ, ವಿರುಗಂಬಕ್ಕಂ ಕ್ಷೇತ್ರದಿಂದ ಕಣಕ್ಕೀಳಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ.

ಶಬರಿನಾಥನ್ ಅವರು ಗೆಲುವು ಸಾಧಿಸುತ್ತಿದ್ದಂತೆ, ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಕಾಣಿಸಿಕೊಂಡ ನಂತರ ವೇದಿಕೆಯಲ್ಲೇ ವಿಜಯ್ ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ.

ದಳಪತಿ ವಿಜಯ್‌ ಅವರ ಆಪ್ತ ಸಹಾಯಕನಾಗಿ ನೇಮಕಗೊಳ್ಳುವುದಕ್ಕೆ ಮುನ್ನ ಹಲವು ವರ್ಷಗಳ ಕಾಲ ಕಾರು ಚಾಲಕನಾಗಿ ಕೆಲಸ ಮಾಡಿದ್ದ ರಾಜೇಂದ್ರನ್‌ ಅವರ ಪುತ್ರ ಶಬರಿನಾಥನ್‌ ಶಾಸಕರಾಗಿ ವಿಧಾನಸಭೆ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ.

ವಿರುಗಂಬಕ್ಕಂ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಪ್ರಭಾಕರನ್‌ ರಾಜ್‌ ವಿರುದ್ಧ ಶಬರಿನಾಥನ್‌ ಅವರು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕಣ್ಣೀರಿಟ್ಟಿದ್ದ ಶಬರಿನಾಥನ್‌

ದಳಪತಿ ವಿಜಯ್‌ ಎಲ್ಲಾ 234 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದಾಗಲೇ ವಿರುಗಂಬಕ್ಕಂ ಕ್ಷೇತ್ರಕ್ಕೆ ಶಬರಿನಾಥನ್‌ ಹೆಸರು ಘೋಷಿಸಿದ್ದರು. ಈ ವೇಳೆ ಅಪ್ಪ – ಮಕ್ಕಳಿಬ್ಬರೂ ವೇದಿಕೆಯಲ್ಲೇ ವಿಜಯ್‌ ಅವರನ್ನ ಅಪ್ಪಿಕೊಂಡು ಕಣ್ಣೀರಿಟ್ಟಿದ್ದರು. ವಿಜಯ್‌ ಪಾದಗಳನ್ನ ಮುಟ್ಟಿ ಶಬರಿನಾಥನ್‌ ಭಾವುಕರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ