ನಟ ವಿಜಯ್, ರಾಹುಲ್ ಗಾಂಧಿ ಸಾಂದರ್ಭಿಕ ಚಿತ್ರ 
ದೇಶ

Tamilnadu: ಆತಂತ್ರ ಫಲಿತಾಂಶ ಸಾಧ್ಯತೆ; TVK ಜೊತೆ ಮೈತ್ರಿಗೆ ಕಾಂಗ್ರೆಸ್ ಗೆ ವಿಜಯ್ ತಂದೆ ಆಹ್ವಾನ?

ಸರ್ಕಾರ ರಚನೆಗೆ ಅಗತ್ಯವಾದಷ್ಟು ಬಹುಮತ ದೊರೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ವಿಟಿಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವಂತೆ ವಿಜಯ್ ಅವರ ತಂದೆ ಆಹ್ವಾನ ನೀಡಿದ್ದಾರೆ.

ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ( ಟಿವಿಕೆ) ಕಮಲ್ ಮಾಡಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಆದಾಗ್ಯೂ, ಸರ್ಕಾರ ರಚನೆಗೆ ಅಗತ್ಯವಾದಷ್ಟು ಬಹುಮತ ದೊರೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ವಿಟಿಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವಂತೆ ವಿಜಯ್ ಅವರ ತಂದೆ ಆಹ್ವಾನ ನೀಡಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಸರ್ಕಾರ ರಚಿಸಲು 117 ಮ್ಯಾಜಿಕ್ ನಂಬರ್ ಆಗಿದೆ. ಆದರೆ ಟಿವಿಕೆ ಪಕ್ಷ ಸುಮಾರು 111 ಸ್ಥಾನಗಳನ್ನು ಗಳಿಸಿರುವುದರಿಂದ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳ ಅಗತ್ಯವಿದೆ.

ಹೀಗಾಗಿ ಟಿವಿಕೆ ಜೊತೆ ಸೇರಿ ಸರ್ಕಾರ ರಚನೆಗೆ ಅಗತ್ಯ ಬೆಂಬಲ ನೀಡುವಂತೆ ವಿಜಯ್ ಅವರ ತಂದೆ ಎಸ್ ಎ ಚಂದ್ರಶೇಖರ್ ಮುಕ್ತ ಆಹ್ವಾನವನ್ನು ನೀಡಿದ್ದಾರೆ. ಅಗತ್ಯ ಸಂಖ್ಯೆಗಳನ್ನು ಪಡೆಯಲು ಟಿವಿಕೆ ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಈ ಹಿಂದೆ ಇತರ ಪಕ್ಷಗಳನ್ನು ಬೆಂಬಲಿಸುವ ಮೂಲಕ ತನ್ನ ಪ್ರಭಾವವನ್ನು ಕಳೆದುಕೊಂಡಿದೆ. ಈಗ ಈ ಹೊಸ ಮೈತ್ರಿ ಮೂಲಕ ಅಧಿಕಾರವನ್ನು ಮರಳಿ ಪಡೆಯುವ ಅವಕಾಶವನ್ನು ಹೊಂದಿದೆ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ