ಅಮಿತ್ ಶಾ 
ದೇಶ

ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಸ್ವತಃ ಅಖಾಡಕ್ಕಿಳಿದ ಅಮಿತ್ ಶಾ; ಯಾರಾಗ್ತಾರೆ CM?

ಅಸ್ಸಾಂನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದ್ದು, ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಅವರನ್ನು ಕಳುಹಿಸುತ್ತಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ಮೊದಲ ಬಾರಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪಕ್ಷದ ಕೇಂದ್ರ ವೀಕ್ಷಕರನ್ನಾಗಿ ಮಂಗಳವಾರ ನೇಮಿಸಲಾಗಿದೆ.

ಅಸ್ಸಾಂನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದ್ದು, ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಅವರನ್ನು ಕಳುಹಿಸುತ್ತಿದೆ.

ಕೇಸರಿ ಪಕ್ಷ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅಸ್ಸಾಂನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಸಹ-ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಅವರನ್ನು ಸಹ-ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಯಾರಾಗ್ತಾರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ?

ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ.

ಸುವೇಂದು ಅಧಿಕಾರಿ

ಟಿಎಂಸಿ ಮಾಜಿ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುವೇಂದು ಅಧಿಕಾರಿ ಬಿಜೆಪಿ ಸೇರಿ ರಾಜ್ಯಾಧ್ಯಕ್ಷರಾಗಿದ್ದರು. 2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಅವರು ಟಿಎಂಸಿಯಿಂದ ಹೊರಬಂದು ಬಿಜೆಪಿ ಸೇರಿದರು. ಪ್ರಸ್ತುತ ಪ್ರತಿಪಕ್ಷ ನಾಯಕರಾಗಿರುವ ಅಧಿಕಾರಿ, ಸಿಎಂ ಸ್ಥಾನದ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.

ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ನಾಯಕನಾಗಿರುವ ಸುವೇಂದು ಅಧಿಕಾರಿ, 2021ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯನ್ನು ಸೋಲಿಸುವ ಮೂಲಕ ಗಮನ ಸೆಳೆದಿದ್ದರು.

ಸಮಿಕ್ ಭಟ್ಟಾಚಾರ್ಯ

ಹೊಸದಾಗಿ ನೇಮಕಗೊಂಡ ಬಂಗಾಳದ ಬಿಜೆಪಿ ಮುಖ್ಯಸ್ಥರಾದ ಸಮಿಕ್ ಭಟ್ಟಾಚಾರ್ಯ ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದವರು. ತೆರೆಮರೆಯಲ್ಲಿ ಕೆಲಸ ಮಾಡಲು ಹೆಸರುವಾಸಿಯಾದ ಭಟ್ಟಾಚಾರ್ಯ ಅವರು ವೈವಿಧ್ಯಮಯ ಸಾಮಾಜಿಕ ಗುಂಪುಗಳಲ್ಲಿ ಬಿಜೆಪಿಯ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಗ್ನಿಮಿತ್ರ ಪಾಲ್

ಫ್ಯಾಷನ್ ಡಿಸೈನರ್ ಆಗಿರುವ ಅಗ್ನಿಮಿತ್ರ ಪಾಲ್, ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಮಹಿಳಾ ನಾಯಕಿಯರಲ್ಲಿ ಒಬ್ಬರು. ಬಿಜೆಪಿ ಮಹಿಳಾ ಮೋರ್ಚಾದ ಬಂಗಾಳ ಘಟಕದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿದ್ದ ಇವರು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗುವ ಮೂಲಕ ಪ್ರಮುಖ ಹುದ್ದೆಯನ್ನು ಏರಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿಂದ ಪದವೀಧರೆಯಾಗಿರುವ ಪಾಲ್ ಹೆಸರು ಸಿಎಂ ಸಂಭಾವ್ಯ ಪಟ್ಟಿಯಲ್ಲಿ ಕೇಳಿಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕ್ಷುಲ್ಲಕ ರಾಜಕೀಯ ಬಿಡಿ': TMC ಸೋಲು ಸಂಭ್ರಮಿಸುತ್ತಿರುವವರಿಗೆ ರಾಹುಲ್ ಗಾಂಧಿ ಬುದ್ಧಿವಾದ!

ಮತ್ತೆ ಭುಗಿಲೆದ್ದ ಸಂಘರ್ಷ: ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ, ಭಾರತ ಖಂಡನೆ

Shocking: AAP ತೊರೆದು BJP ಸೇರಿದ ಸಂಸದರಿಗೆ ಕಿರುಕುಳ, ರಾಷ್ಟ್ರಪತಿಗಳ ಮೊರೆ ಹೋದ Raghav Chadha ಅಂಡ್ ಟೀಂ!

ಮುಸ್ಲಿಮರ ಮತ ಹಿಜಾಬ್ ಧರಿಸುವ ಮಮತಾ ಗೆ ಹೋಗಿವೆ, ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ!

ಬೆಂಗಳೂರು: ಕಾಲೇಜ್ ವಿದ್ಯಾರ್ಥಿಗಳೇ ಟಾರ್ಗೆಟ್, ಆರು ಮಂದಿ ಡ್ರಗ್ ಡೀಲರ್ ಬಂಧನ!

SCROLL FOR NEXT