ನರೇಂದ್ರ ಮೋದಿ 
ದೇಶ

ಮೇ 9ಕ್ಕೆ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: NDA ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಆಹ್ವಾನ!

ದಶಕಗಳ ಕಾಲ ಆಡಳಿತ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು (ಟಿಎಂಸಿ) ಸೋಲಿಸಿ, ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.

ಕೋಲ್ಕತ್ತ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 9ರಂದು ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮೀಕ್‌ ಭಟ್ಟಾಚಾರ್ಯ ತಿಳಿಸಿದ್ದಾರೆ.

15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್‌ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು (ಟಿಎಂಸಿ) ಸೋಲಿಸಿ, ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.

ಮೇ 4ರಂದು (ಸೋಮವಾರ) ಚುನಾವಣಾ ಫಲಿತಾಂಶ ಪ್ರಕಟವಾಗಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ 206, ಟಿಎಂಸಿ 80, ಕಾಂಗ್ರೆಸ್ 2, ಇತರೆ ಪಕ್ಷಗಳು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಸ್ಪಷ್ಟ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚನೆಗೆ ಸಜ್ಜಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಿನಾಮೆ ಕೊಡದ ದೀದಿಗೆ ಶಾಕ್; ತಮ್ಮ ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ!

ಆಗಸದಲ್ಲಿ ದಾರಿ ತಪ್ಪಿದ ಮಹಾರಾಷ್ಟ್ರ ಡಿಸಿಎಂ Eknath Shinde ಹೆಲಿಕಾಪ್ಟರ್; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್, Video!

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್-ದೇವಿಶಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ

36 ಗಂಟೆಯಲ್ಲಿ 8 ಎನ್ಕೌಂಟರ್; 12 ಆರೋಪಿಗಳ ಹೆಡೆಮುರಿ ಕಟ್ಟಿದ ಉತ್ತರ ಪ್ರದೇಶ ಪೊಲೀಸರು!

ಬೆಂಗಳೂರಿನಲ್ಲೇ ಆಡ್ಬೇಕಿತ್ತು, ಆದ್ರೆ..: IPL 2026 ಫೈನಲ್ ಪಂದ್ಯದ ಮೈದಾನ ಬದಲಾವಣೆಗೆ ಇದೇ ಕಾರಣ ಎಂದ BCCI

SCROLL FOR NEXT