ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

'ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ': ಟಿವಿಕೆಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಟೀಕೆ

ಡಿಎಂಕೆ ವಕ್ತಾರ ಸರವಣನ್ ಅಣ್ಣಾದುರೈ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಈ ನಿರ್ಧಾರಕ್ಕೆ ಕಾಂಗ್ರೆಸ್ ಹಿಂದಿನಿಂದ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಎಂ ಕೆ ಸ್ಟಾಲಿನ್, ರಾಹುಲ್ ಗಾಂಧಿ
Sumana Upadhyaya
Updated On : 6 May 2026, 12:20 pm

ತಮಿಳು ನಾಡು ರಾಜಕೀಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮಧ್ಯೆ ದ್ರಾವಿಡ ಮುನ್ನೇತ್ರ ಕಳಗಂ (DMK) ಕಾಂಗ್ರೆಸ್ ನ್ನು ಬೆನ್ನಿಗೆ ಚೂರಿಗೆ ಹಾಕಿದ ಪಕ್ಷ ಎಂದು ಆರೋಪಿಸಿದೆ. ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಡಿಎಂಕೆ ವಕ್ತಾರ ಸರವಣನ್ ಅಣ್ಣಾದುರೈ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಈ ನಿರ್ಧಾರಕ್ಕೆ ಕಾಂಗ್ರೆಸ್ ಹಿಂದಿನಿಂದ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನ ಈ ನಿರ್ಧಾರ ತಕ್ಷಣದ ಒಳಿತಿಗೆ ಮಾತ್ರವಾದದ್ದು. 2029ರ ಲೋಕಸಭೆ ಮಹತ್ವದ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಮಾಡಲು ನಾವು ಆತ್ಮವಿಶ್ವಾಸದಲ್ಲಿದ್ದೆವು. ಆದರೆ ಕಾಂಗ್ರೆಸ್‌ನ ಈ ಕ್ರಮದಿಂದ ಅದು ಸ್ಥಿರವಲ್ಲದ ಮೈತ್ರಿ ಪಾಲುದಾರವಾಗಿ ಪರಿಣಮಿಸಿದೆ. ದೇಶದಾದ್ಯಂತ ಕಾಂಗ್ರೆಸ್‌ ಮೇಲೆ ಜನರು ವಿಶ್ವಾಸ ಇರಲಾರದು ಎಂಬ ಭಾವನೆ ಮೂಡುತ್ತಿದೆ ಎಂದು ಅವರು ಹೇಳಿದರು.

Advertisement

Advertisement

ಕಾಂಗ್ರೆಸ್‌ನ ನಡೆ ಬಗ್ಗೆ ಡಿಎಂಕೆ ಚಿಂತನೆ

ಕಾಂಗ್ರೆಸ್‌ನ ಈ ಹೆಜ್ಜೆ ಮೈತ್ರಿ ಪಕ್ಷಗಳಲ್ಲಿ ದೊಡ್ಡ ಪರಿಣಾಮ ಬೀರುತ್ತದೆ ಎಂದು ಅಣ್ಣಾದುರೈ ಹೇಳಿದರು. “ಟಿವಿಕೆಗೆ ಬೆಂಬಲ ನೀಡಲು ಅವರು ನೀಡಿದ ಕಾರಣಗಳು ಸಮರ್ಥನೀಯವಾಗಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನ್ನು ದೂರವಿಡಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಆದರೆ ಇದು ಸಂಪೂರ್ಣವಾಗಿ ಕಾಂಗ್ರೆಸ್‌ನ ಸ್ವತಂತ್ರ ನಿರ್ಧಾರ. ಫಲಿತಾಂಶ ಹೊರಬಂದ ತಕ್ಷಣವೇ ಜನಮತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಅಖಿಲೇಶ್ ಯಾದವ್, ತೇಜಸ್ವಿ ಯಾದವ್, ಉದ್ಧವ್ ಠಾಕ್ರೆ ಮೊದಲಾದವರ ಮನಸ್ಸಿನಲ್ಲಿ ಯಾವ ಪರಿಣಾಮ ಬೀರಬಹುದು ಎಂದು ಪ್ರಶ್ನಿಸಿದರು. ನಾವು ಎಂದಿಗೂ ಕಾಂಗ್ರೆಸ್‌ನ್ನು ಸೋಲಿಸಿಲ್ಲ, ಅದಕ್ಕೆ ಅನ್ಯಾಯ ಮಾಡಿರಲಿಲ್ಲ ಎಂದರು.

ವಿಧಾನಸಭೆ ಚುನಾವಣೆ ಮೈತ್ರಿಗಳು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಬಹುಮತಕ್ಕಿಂತ 10 ಸ್ಥಾನಗಳು ಕಡಿಮೆಯಾದ ಹಿನ್ನೆಲೆಯಲ್ಲಿ, ಸರ್ಕಾರ ರಚನೆಗೆ ಕಾಂಗ್ರೆಸ್ ಏಕಮತದಿಂದ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದಿದ್ದು, ಸರಳ ಬಹುಮತಕ್ಕೆ ಇನ್ನೂ 10 ಶಾಸಕರ ಬೆಂಬಲ ಅಗತ್ಯವಿದೆ. ಕಾಂಗ್ರೆಸ್ 5 ಸ್ಥಾನಗಳನ್ನು, ಪಟ್ಟಾಳಿ ಮಕ್ಕಳ್ ಕಚ್ಚಿ 4 ಸ್ಥಾನಗಳನ್ನು ಗೆದ್ದಿವೆ. ಸಿಪಿಐ ಮತ್ತು ಸಿಪಿಎಂ ತಲಾ 2 ಸ್ಥಾನಗಳನ್ನು ಪಡೆದಿವೆ. ಆಡಳಿತದಲ್ಲಿದ್ದ ಡಿಎಂಕೆ 59 ಸ್ಥಾನಗಳನ್ನು, ಎಐಎಡಿಎಂಕೆ 47 ಸ್ಥಾನಗಳನ್ನು ಗೆದ್ದಿವೆ.

ಭಾರತೀಯ ಜನತಾ ಪಕ್ಷ, ದೇಶೀಯ ಮುರಪೊಕ್ಕು ದ್ರಾವಿಡ ಕಳಗಂ ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ತಲಾ ಒಂದು ಸ್ಥಾನವನ್ನು ಪಡೆದಿದ್ದು, ವಿಸಿಕೆ 2 ಸ್ಥಾನಗಳನ್ನು ಗೆದ್ದಿದೆ.

ಚುನಾವಣೆಗೆ ಮುನ್ನ ಕಾಂಗ್ರೆಸ್ ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ, ಬಿಜೆಪಿ ಎಐಎಡಿಎಂಕೆಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

Also Read

Watch | TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ! ವಿಜಯ್ ಪ್ರಮಾಣವಚನಕ್ಕೆ ಸಿದ್ಧತೆ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments