ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ 
ದೇಶ

ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್; ನಾಳೆಯೇ ಪ್ರಮಾಣವಚನ ಸಾಧ್ಯತೆ

ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಇಂದು ಮಧ್ಯಾಹ್ನ 3.30ರ ಸುಮಾರಿಗೆ ಲೋಕಭವನಕ್ಕೆ ಆಗಮಿಸಿದ ವಿಜಯ್, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿಸಿದರು.

ಸರ್ಕಾರ ರಚನೆ ವಿಷಯದ ಬಗ್ಗೆ ಟಿವಿಕೆ ಸಂಸ್ಥಾಪಕ ವಿಜಯ್ ಅವರು ಹೊಸ ಪತ್ರ ಬರೆದಿದ್ದಾರೆ ಮತ್ತು ಮೇ 7 ರಂದು ಬೆಳಗ್ಗೆ 11.30 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಡೆಸುವಂತೆ ರಾಜ್ಯಪಾಲರನ್ನು ವಿನಂತಿಸಿದ್ದಾರೆ ಎಂದು ಟಿವಿಕೆ ಮೂಲವೊಂದು ತಿಳಿಸಿದೆ.

ಏತನ್ಮಧ್ಯೆ, ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ