ರಾಜಸ್ಥಾನ ಮಾಜಿ ಸಚಿವ ಮಹೇಶ್ ಜೋಶಿ  
ದೇಶ

ಜಲ ಜೀವನ್ ಮಿಷನ್ ಹಗರಣ: ರಾಜಸ್ಥಾನ ಮಾಜಿ ಸಚಿವ ಮಹೇಶ್ ಜೋಶಿ ACB ವಶಕ್ಕೆ..!

ಜೈಪುರ ರೈಲು ನಿಲ್ದಾಣದ ಸಮೀಪದ ಸ್ಯಾನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ (SIT) ದಾಳಿ ನಡೆಸಿ ಮಹೇಶ್ ಜೋಶಿ ಅವರನ್ನು ಬಂಧಿಸಿದೆ.

ಜಲ ಜೀವನ್ ಮಿಷನ್ (JJM) ಸಂಬಂಧಿಸಿದ 900 ಕೋಟಿ ರೂ. ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಮಹೇಶ್ ಜೋಶಿ ಅವರನ್ನು ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳು ಜೈಪುರದಲ್ಲಿ ಬಂಧನಕ್ಕೊಳಪಡಿಸಿದ್ದಾರೆ.

ಜೈಪುರ ರೈಲು ನಿಲ್ದಾಣದ ಸಮೀಪದ ಸ್ಯಾನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ (SIT) ದಾಳಿ ನಡೆಸಿ ಮಹೇಶ್ ಜೋಶಿ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹೇಶ್ ಜೋಶಿ ಅವರು ಅಂದಿನ PHED ಸಚಿವರಾಗಿದ್ದ ವೇಳೆ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಟೆಂಡರ್ ಹಂಚಿಕೆಯಲ್ಲಿ ಲಂಚ ಪಡೆದಿದ್ದಾರೆ ಎಂಬ ಆರೋಪ ಇದ್ದು,. ಈ ಸಂಬಂಧ 2024ರ ಅಂತ್ಯದಲ್ಲಿ ಎಸಿಬಿ ಎಫ್ಐಆರ್ ದಾಖಲಿಸಿಕೊಂಡಿತ್ತು.

ಈ ಪ್ರಕರಣದಲ್ಲಿ ಹಲವಾರು ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಜೋಶಿ ಅವರನ್ನು 2025 ಏಪ್ರಿಲ್‌ನಲ್ಲಿ ಇಡಿ (ಜಾರಿ ನಿರ್ದೇಶನಾಲಯ) ಕೂಡ ಬಂಧಿಸಿತ್ತು. ಸುಮಾರು ಏಳು ತಿಂಗಳು ಜೈಲಿನಲ್ಲಿ ಇದ್ದ ಬಳಿಕ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಈಗ ಎಸಿಬಿ ಮತ್ತೆ ಮಹೇಶ್ ಜೋಶಿ ಅವರನ್ನು ಬಂಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ