ಮೊಹಮ್ಮದ್ ನೂರುಲ್ ಹುಡಾ - ಮಮತಾ 
ದೇಶ

ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ; ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ: ಮಮತಾಗೆ ಆಗ್ರಹ

ಬಾಂಗ್ಲಾದೇಶದ ನಾಯಕ ಮೊಹಮ್ಮದ್ ನೂರುಲ್ ಹುಡಾ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ "ದೆಹಲಿಯ ವಿರುದ್ಧ ಯುದ್ಧ ಘೋಷಿಸುವಂತೆ" ಆಗ್ರಹಿಸಿದ್ದಾರೆ ಮತ್ತು ನಿಮ್ಮ ಬೆನ್ನಿಗೆ 17 ಕೋಟಿ ಬಾಂಗ್ಲಾದೇಶಿ ಮುಸ್ಲಿಮರು ನಿಲ್ಲುತ್ತಾರೆ ಎಂದು ಹೇಳಿದ್ದಾರೆ.

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿದ್ದು, 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತ ಅಂತ್ಯಗೊಂಡಿದೆ.

ಟಿಎಂಸಿ ಹೀನಾಯ ಸೋಲಿನ ನಂತರ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದ ನಾಯಕರೊಬ್ಬರು ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತಹ ಅಪಾಯಕಾರಿ ಹೇಳಿಕೆ ನೀಡಿದ್ದು, ಪಶ್ಚಿಮ ಬಂಗಾಳವನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸುವಂತೆ ಮಮತಾ ಬ್ಯಾನರ್ಜಿ ಅವರಿಗೆ ಒತ್ತಾಯಿಸಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಬಾಂಗ್ಲಾದೇಶದ ನಾಯಕ ಮೊಹಮ್ಮದ್ ನೂರುಲ್ ಹುಡಾ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ "ದೆಹಲಿಯ ವಿರುದ್ಧ ಯುದ್ಧ ಘೋಷಿಸುವಂತೆ" ಆಗ್ರಹಿಸಿದ್ದಾರೆ ಮತ್ತು ನಿಮ್ಮ ಬೆನ್ನಿಗೆ 17 ಕೋಟಿ ಬಾಂಗ್ಲಾದೇಶಿ ಮುಸ್ಲಿಮರು ನಿಲ್ಲುತ್ತಾರೆ ಎಂದು ಹೇಳಿದ್ದಾರೆ. ಈ ಹೇಳಿಕೆಯು ಭಾರತದ ಸಾರ್ವಭೌಮತ್ವಕ್ಕೆ ನೇರ ಸವಾಲಾಗಿದ್ದು, ಭದ್ರತಾ ಸಂಸ್ಥೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನೂರುಲ್ ಹುಡಾ ಅವರು ಮಮತಾ ಬ್ಯಾನರ್ಜಿ ಅವರನ್ನು ಉದ್ದೇಶಿಸಿ ಮಾತನಾಡುತ್ತಾ, ನೀವು ಯಾವುದೇ ಕಾರಣಕ್ಕೂ ಸೋಲೊಪ್ಪಬಾರದು. ಪಶ್ಚಿಮ ಬಂಗಾಳವನ್ನು ಸ್ವತಂತ್ರ ಎಂದು ಘೋಷಿಸಿ. ಭಾರತ ಸರ್ಕಾರದ ವಿರುದ್ಧ ಯುದ್ಧ ಆರಂಭಿಸಿ ಎಂದು ಕರೆ ನೀಡಿದ್ದಾರೆ.

ಈ ವಿಡಿಯೋದಲ್ಲಿರುವ ವ್ಯಕ್ತಿ ತನ್ನನ್ನು ತಾನು ಬಾಂಗ್ಲಾದೇಶದ ನಾಯಕನೆಂದು ಬಿಂಬಿಸಿಕೊಂಡಿದ್ದರೂ, ಆತನ ನಿಜವಾದ ಗುರುತಿನ ಬಗ್ಗೆ ಗೊಂದಲಗಳಿವೆ. ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಯ ವೇಳೆ ಸುದ್ದಿಯಲ್ಲಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗರ್ವನರ್ ಹೇಳಿದ್ದೇನು?

ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನತೆ

ಆಪರೇಷನ್ ಸಿಂದೂರ್‌ಗೆ ಒಂದು ವರ್ಷ; ಪ್ರಧಾನಿ ಮೋದಿಯ ಸಾಮಾಜಿಕ ಮಾಧ್ಯಮ ಖಾತೆಯ DP ಚೇಂಜ್

ಅಮೇರಿಕಾ ಎಕಾನಮಿ ಕುಸಿತಕ್ಕೆ ದಿನಗಣನೆ, ಐಸಿಯುವಿನಲ್ಲಿ US ಆರ್ಥಿಕತೆ! (ಹಣಕ್ಲಾಸು)

SCROLL FOR NEXT