ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ 
ದೇಶ

ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಪುತ್ರ ಸೇರಿ 32 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭಾಗವಹಿಸಿದ್ದರು.

ಪಾಟ್ನಾ: ಜೆಡಿಯು ಅಧ್ಯಕ್ಷ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಸೇರಿದಂತೆ NDAನ 32 ನಾಯಕರು ಗುರುವಾರ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಯಿಂದ 15 ನಾಯಕರು, ಜೆಡಿ(ಯು)ನಿಂದ 13, ಎಲ್‌ಜೆಪಿ(ಆರ್‌ವಿ)ಯಿಂದ ಇಬ್ಬರು ಮತ್ತು ಎಚ್‌ಎಎಂ ಮತ್ತು ಆರ್‌ಎಲ್‌ಎಂನಿಂದ ತಲಾ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ ಸಂಪುಟಕ್ಕೆ ಐದು ಹೊಸ ಮುಖಗಳನ್ನು ಸೇರಿಸಿಕೊಳ್ಳಲಾಗಿದೆ.

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಎನ್ ಡಿಎನ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.

ಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.

"ನಿಶಾಂತ್ ಅವರು ಪಕ್ಷಕ್ಕೆ ಸೇರಿದಾಗಿನಿಂದ, ಅವರು ಸರ್ಕಾರ ಸೇರಬೇಕೆಂಬುದು ಕಾರ್ಯಕರ್ತರ ಆಶಯವಾಗಿತ್ತು. ಕಳೆದ ತಿಂಗಳು ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬಹುದಿತ್ತು. ಆದರೆ ಅವರು ಹಿಂಜರಿಯುತ್ತಿದ್ದರು. ಅಂತಿಮವಾಗಿ, ಅವರು ಒಪ್ಪಿಕೊಂಡಿದ್ದಾರೆ" ಎಂದು ಮೂಲಗಳು ಬುಧವಾರ ಪಿಟಿಐಗೆ ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!