ವಿಜಯ್ ಮತ್ತು ಕಮಲ್ ಹಾಸನ್  
ದೇಶ

ವಿಜಯ್‌ಗೆ ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ಜನಾದೇಶಕ್ಕೆ ಅಗೌರವ ತೋರಿದಂತೆ: TVK ಪರ ಕಮಲ್ ಹಾಸನ್ ಬ್ಯಾಟಿಂಗ್

ಟಿವಿಕೆ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಆದರೆ ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವುದರಿಂದ ರಾಜ್ಯಪಾಲರು ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುತ್ತಿಲ್ಲ.

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಟಿವಿಕೆ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಆದರೆ ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವುದರಿಂದ ರಾಜ್ಯಪಾಲರು ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುತ್ತಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು, ವಿಜಯ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ತಮಿಳುನಾಡಿನ ಜನಾದೇಶಕ್ಕೆ ಅಗೌರವ ತೋರಿದಂತಾಗುತ್ತದೆ ಎಂದು ಹೇಳಿದ್ದಾರೆ.

ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು. ತಮಿಳಗ ವೆಟ್ರಿ ಕಳಗಂ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅತಿ ದೊಡ್ಡ ಪಕ್ಷವಾಗಿರುವ ವಿಜಯ್ ಅವರನ್ನು ಸರ್ಕಾರ ರಚಿಸಲು ಕರೆಯದಿರುವುದು ತಮಿಳುನಾಡು ಜನತೆ ನೀಡಿದ ತೀರ್ಪಿಗೆ ಮಾಡುವ ಅವಮಾನ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಆಡಳಿತ ನಡೆಸುವ ಅಧಿಕಾರವನ್ನು ಜನತೆ ನೀಡಿಲ್ಲ. ತಮಿಳುನಾಡಿನ ಇತಿಹಾಸದಲ್ಲೇ ಇಂತಹ ತೀರ್ಪು ಹಿಂದೆಂದೂ ಬಂದಿರಲಿಲ್ಲ. ನನ್ನ ಸಹೋದರ ಎಂ.ಕೆ. ಸ್ಟಾಲಿನ್ ಅವರು, ನಾವು ಜನರ ತೀರ್ಪನ್ನು ಗೌರವಿಸುತ್ತೇವೆ ಮತ್ತು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಘೋಷಿಸಿದ್ದಾರೆ. ಅವರ ಈ ರಾಜಕೀಯ ಮುತ್ಸದ್ದಿತನವನ್ನು ನಾನು ಗೌರವಿಸುತ್ತೇನೆ’ ಎಂದು ಕಮಲ್ ಹಾಸನ್ ಹೇಳಿದ್ದಾರೆ.

‘ಈಗ ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ಸಹ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕಿದೆ. ಈಗಾಗಲೇ ಆಯ್ಕೆಯಾಗಿರುವ 233 ಸದಸ್ಯರು ಇನ್ನೂ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದಿರುವುದು ರಾಜ್ಯಕ್ಕೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗುತ್ತಿರುವ ದೊಡ್ಡ ಹಾನಿ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

‘ಬಹುಮತ ಎಂಬುದು ವಿಧಾನಸಭೆಯ ಒಳಗೆ ಸಾಬೀತಾಗಬೇಕೇ ಹೊರತು, ರಾಜ್ ಭವನದ ಒಳಗಲ್ಲ ಎಂದು ಎಸ್.ಆರ್. ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ನಾನು ಮಾತನಾಡುತ್ತಿರುವುದು ಕೇವಲ ಪಕ್ಷದ ಪರವಾಗಿ ಅಲ್ಲ, ಬದಲಿಗೆ ಒಬ್ಬ ಭಾರತೀಯ ಪ್ರಜೆಯಾಗಿ ಸಾಂವಿಧಾನಿಕ ಆಶಯದ ಧ್ವನಿಯಾಗಿ. ತಮಿಳುನಾಡು ಜನರ ತೀರ್ಪಿಗೆ ಸರಿಯಾದ ಗೌರವ ಸಿಗಲೇಬೇಕು’ ಎಂದು ಅವರು ಆಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?

ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ; ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ: ಮಮತಾಗೆ ಆಗ್ರಹ

ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನತೆ

ಆಪರೇಷನ್ ಸಿಂದೂರ್‌ಗೆ ಒಂದು ವರ್ಷ; ಪ್ರಧಾನಿ ಮೋದಿಯ ಸಾಮಾಜಿಕ ಮಾಧ್ಯಮ ಖಾತೆಯ DP ಚೇಂಜ್

SCROLL FOR NEXT