ಪ್ರಕಾಶ್ ರಾಜ್, ಟಿವಿಕೆ ವಿಜಯ್  
ದೇಶ

'ಸಮಾಜ ಅಭಿಮಾನಿಗಳ ಪ್ರಭಾವಕ್ಕೆ ಒಳಗಾಗಿದೆ ಎಂಬುದು ಸಾಬೀತಾಗಿದೆ': ಪ್ರಕಾಶ್ ರಾಜ್

ನಟ ಪ್ರಕಾಶ್ ರಾಜ್ ತಮಿಳು ನಾಡು ಚುನಾವಣಾ ಫಲಿತಾಂಶಗಳ ಬಗ್ಗೆ ಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗಳ ಸ್ಥಿತಿಯನ್ನು ಉಲ್ಲೇಖಿಸಿ ಸಮಾಜ ಅಭಿಮಾನಿಗಳ ಆಧಿಪತ್ಯಕ್ಕೆ ಒಳಗಾಗಿದೆ ಎಂದು ಅವರು ಟೀಕಿಸಿದ್ದಾರೆ.

ನಟ-ರಾಜಕಾರಣಿ ವಿಜಯ್ ಅವರ ಪಕ್ಷ ತಮಿಳಿಗ ವೆಟ್ರಿ ಕಳಗಂ (TVK) ತಮಿಳುನಾಡು ವಿಧಾನಸಭೆ ಚುನಾವಣಾ ಫಲಿತಾಂಶಗಳಲ್ಲಿ ಮುನ್ನಡೆ ಸಾಧಿಸಿದ ನಂತರ ದಕ್ಷಿಣ ಭಾರತ ಚಿತ್ರರಂಗದ ಹಲವು ನಟರು ಅಭಿನಂದನೆ ಸಲ್ಲಿಸಿದ್ದಾರೆ. ರಜನಿಕಾಂತ್,ಚಿರಂಜೀವಿ, ರಾಮ್ ಚರಣ್, ರಶ್ಮಿಕಾ ಮಂದಣ್ಣ ಮೊದಲಾದವರು ವಿಜಯ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಟ ಪ್ರಕಾಶ್ ರಾಜ್ ತಮಿಳು ನಾಡು ಚುನಾವಣಾ ಫಲಿತಾಂಶಗಳ ಬಗ್ಗೆ ಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗಳ ಸ್ಥಿತಿಯನ್ನು ಉಲ್ಲೇಖಿಸಿ ಸಮಾಜ ಅಭಿಮಾನಿಗಳ ಆಧಿಪತ್ಯಕ್ಕೆ ಒಳಗಾಗಿದೆ ಎಂದು ಅವರು ಟೀಕಿಸಿದ್ದಾರೆ.

ಪ್ರಕಾಶ್ ರಾಜ್ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, ನಮಸ್ಕಾರ ತಮಿಳುನಾಡು.. ಕಾಮರಾಜ್ ಸೋತರು. ಎಂ.ಕೆ. ಸ್ಟಾಲಿನ್ ಸೋತಿದ್ದಾರೆ. ಸಮಾಜ ಅಭಿಮಾನಿಗಳ ಪ್ರಭಾವಕ್ಕೆ ಒಳಗಾಗಿದೆ. ಇದು ರಾಜಕೀಯವಾಗಿಲ್ಲ ಎಂಬುದು ಸಾಬೀತಾಗಿದೆ ಎಂದು ಬರೆದಿದ್ದಾರೆ.

ರಾಜಕೀಯ ಜಾಗೃತಿ ಮೂಡಿಸುವ ಕೆಲಸ ಯಾವಾಗಲೂ ವಿರೋಧ ಪಕ್ಷದ ಕೆಲಸವೇ ಆಗಿರುತ್ತದೆ. ನಮ್ಮ ಪಯಣ ಮುಂದುವರಿಸೋಣ. ಗೆದ್ದವರಿಗೆ ಸಾರ್ವಜನಿಕ ಸೇವೆಯಲ್ಲಿ ಯಶಸ್ಸಿಗಾಗಿ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಒಬ್ಬ X ಬಳಕೆದಾರ, ನೀವು ತಮಿಳಿಗರಲ್ಲ, ನಮ್ಮ ಪರವಾಗಿ ಮಾತನಾಡಬೇಡಿ ಎಂದು ಬರೆದಿದ್ದಾನೆ. ಮತ್ತೊಬ್ಬ ಬಳಕೆದಾರ, ನೀವೂ ನಟರೇ, ಆದರೆ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದ್ದೀರಿ ಎಂದು ಟೀಕಿಸಿದ್ದಾರೆ. ಮತ್ತೊಬ್ಬ ಅಭಿಮಾನಿ, ನೀವು ಕರ್ನಾಟಕದಲ್ಲಿ ಇರುತ್ತೀರಿ. ತಮಿಳುನಾಡು ರಾಜಕೀಯಕ್ಕೆ ಯಾಕೆ ಪ್ರವೇಶಿಸುತ್ತೀರಿ, ನಮಗೆ ಏನು ಮಾಡಬೇಕು ಎಂಬುದು ಗೊತ್ತಿದೆ. ನಿಮ್ಮ ಸಲಹೆ ಬೇಕಿಲ್ಲ ಎಂದು ಟೀಕಿಸಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ, ವಿಜಯ್ ಅವರ ಟಿವಿಕೆ ಪಕ್ಷವು 108 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ತನ್ನ ಮೊದಲ ಚುನಾವಣೆಯಲ್ಲೇ ಅತಿ ಹೆಚ್ಚು ಶೇಕಡಾವಾರು ಮತ ದಾಖಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!