ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಶುಕ್ರವಾರ, ಮೇ 8, 2026 ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ (ಎಡ) ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ. Photo | PTI
ದೇಶ

ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ನಾಳೆ ಪ್ರಮಾಣ

ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಲು ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು. ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಘೋಷಿಸಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

"ಪಶ್ಚಿಮ ಬಂಗಾಳ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ" ಎಂದು ಪಶ್ಚಿಮ ಬಂಗಾಳದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ವೀಕ್ಷಕರಾಗಿ ನೇಮಕಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಜೆ 6:30ಕ್ಕೆ ರಾಜ್ಯಪಾಲರ ಭೇಟಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಅವರು ಇಂದು ಸಂಜೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಎನ್ ರವಿ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!