ಸಾಂದರ್ಭಿಕ ಚಿತ್ರ 
ದೇಶ

ಹೃದಯವಿದ್ರಾವಕ ಘಟನೆ: ನರ್ಮದಾ ಕಾಲುವೆಗೆ ಬಿದ್ದು 3 ತಿಂಗಳ ಶಿಶು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

ಸಪ್ನಾಬೆನ್ ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ಮೊದಲು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ. ನಂತರ ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಪತಿ ವಿನುಭಾಯಿ, ತನ್ನ ಕುಟುಂಬವನ್ನು ರಕ್ಷಿಸಲು ನೀರಿಗೆ ಹಾರಿದ್ದಾರೆ.

ಅಹಮದಾಬಾದ್: ಗುಜರಾತ್ ನ ಖೇಡಾದ ಕಪಡ್ವಂಜ್ ತಾಲ್ಲೂಕಿನ ನರ್ಮದಾ ಮುಖ್ಯ ಕಾಲುವೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದ್ದು, ಸಾಮೂಹಿಕ ಆತ್ಮಹತ್ಯೆಯ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸಪ್ನಾಬೆನ್ ಸೋಲಂಕಿ, ಅವರ ಪತಿ ವಿನುಭಾಯಿ, ಅವರ ಮೂರು ವರ್ಷದ ಮಗಳು ನೀತಿ ಮತ್ತು ಮೂರು ತಿಂಗಳ ಶಿಶು ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಸಪ್ನಾಬೆನ್ ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ಮೊದಲು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ. ನಂತರ ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಪತಿ ವಿನುಭಾಯಿ, ತನ್ನ ಕುಟುಂಬವನ್ನು ರಕ್ಷಿಸಲು ನೀರಿಗೆ ಹಾರಿದ್ದಾರೆ. ಆದಾಗ್ಯೂ, ಕಾಲುವೆಯ ಅಪಾಯಕಾರಿ ಆಳ ಮತ್ತು ತೀವ್ರವಾದ ಹರಿವು ಅವರನ್ನೂ ಬಲಿ ಪಡೆದಿದೆ.

ಮಾಹಿತಿ ಬಂದ ನಂತರ, ಸ್ಥಳೀಯ ಈಜುಗಾರರೊಂದಿಗೆ ಕಪಡ್ವಂಜ್ ಅಗ್ನಿಶಾಮಕ ದಳ, ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ಕಾಲುವೆಯಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ಪ್ರಾರಂಭಿಸಿತು. ನಾಲ್ವರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮೃತ ಮಹಿಳೆಯ ತಂದೆಯ ದೂರಿನ ಆಧಾರದ ಮೇಲೆ, ಅತರ್ಸುಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ