ವಿಜಯ್- ಪ್ರಧಾನಿ ನರೇಂದ್ರ ಮೋದಿ online desk
ದೇಶ

ಜನರ ಜೀವನ ಸುಧಾರಣೆಗೆ ಒಟ್ಟಾಗಿ ಕೆಲಸ ಮಾಡೋಣ: 'ದಳಪತಿ' ವಿಜಯ್‌ಗೆ ಪ್ರಧಾನಿ ಮೋದಿ ಶುಭಹಾರೈಕೆ

ತಮಿಳುನಾಡಿನ ಜನರ ಜೀವನಮಟ್ಟ ಸುಧಾರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲಿದೆ.

ನವದೆಹಲಿ: ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಜಯ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ ಅವರು, “ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಆಡಳಿತಾವಧಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.

ತಮಿಳುನಾಡಿನ ಜನರ ಜೀವನಮಟ್ಟ ಸುಧಾರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರಧಾನಿ ಮೋದಿಯವರು ಶುಭ ಹಾರೈಸಿದ್ದಾರೆ.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ ವಿಜಯ್ ಭಾನುವಾರ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜಕೀಯ ಹಾಗೂ ಸಿನಿರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಸರ್ಕಾರದ ಆಡಳಿತದ ಹೊಣೆ ಹೊತ್ತ ತಕ್ಷಣವೇ ವಿಜಯ್ ಉಚಿತ ವಿದ್ಯುತ್‌ ಯೋಜನೆ (200 ಯೂನಿಟ್‌ಗಳವರೆಗೆ), ಮಹಿಳಾ ರಕ್ಷಣಾ ಪಡೆ ರಚನೆ ಹಾಗೂ ಪ್ರತಿ ಜಿಲ್ಲೆಯಲ್ಲಿ ಮಾದಕವಸ್ತು ವಿರೋಧಿ ದಳ ಸ್ಥಾಪನೆಗೆ ಸಂಬಂಧಿಸಿದ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ. ಜೊತೆಗೆ ರಾಜ್ಯದ ಜನತೆಗೆ ಸ್ವಚ್ಛ ಹಾಗೂ ಪಾರದರ್ಶಕ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

"ಸ್ಟಾಲಿನ್ ಸರ್, ಬಾಯಿ ಬಿಡಿ": ವೀರಮಣಿ ಸೆಕ್ಸ್ ಹಗರಣ ಉಲ್ಲೇಖಿಸಿ DMK ವಿರುದ್ಧ CM ವಿಜಯ್ ವಾಗ್ದಾಳಿ

ಮಲಗಿದ್ದಕ್ಕೆ ಕೆಲಸ ಕಳೆದುಕೊಂಡ ಟೆಕ್ಕಿ; ಈಗ 964 ಕೋಟಿ ರೂ ಪರಿಹಾರಕ್ಕೆ ಬೇಡಿಕೆ!

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!