ಸಿಎಂ ಜೋಸೆಫ್ ವಿಜಯ್ ಮತ್ತು ಮಾಜಿ ಸಿಎಂ ಎಂಕೆ ಸ್ಟಾಲಿನ್ 
ದೇಶ

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ'; ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆ, ಈ ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಚೆನ್ನೈ: ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಟ ವಿಜಯ್ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮಾಜಿ ಸಿಎಂ ಸ್ಟಾಲಿನ್ ಗೆ ಶಾಕ್ ನೀಡಿದ್ದು, ಡಿಎಂಕೆ ಅವಧಿಯಲ್ಲಿನ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆ, ಈ ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಜೋಸೆಫ್ ವಿಜಯ್, 'ಹಿಂದಿನ ಡಿಎಂಕೆ ಸರ್ಕಾರವು ರಾಜ್ಯದ ಮೇಲೆ ₹ 10 ಲಕ್ಷ ಕೋಟಿ ಸಾಲವನ್ನು ಉಳಿಸಿದೆ. ನನ್ನ ಮೇಲೆ ಎಷ್ಟು ಹೊರೆಯನ್ನು ಹೊರಿಸಿದ್ದಾರೆ ಎಂಬುದನ್ನು ನಿಮಗೆಲ್ಲ ತಿಳಿಸಲು ಬಯಸುತ್ತೇನೆ. 2021-2026 ಅವಧಿಗೆ ರಾಜ್ಯದ ಹಣಕಾಸು ವ್ಯವಹಾರದ ಕುರಿತು ಶ್ವೇತಪತ್ರ ಬಿಡುಗಡೆ ಮಾಡುತ್ತೇನೆ' ಎಂದು ಹೇಳಿದರು.

ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತದ ಭರವಸೆ ನೀಡಿದ ಸಿಎಂ ವಿಜಯ್, 'ಗುಣಮಟ್ಟದ ಶಿಕ್ಷಣ, ಉತ್ತಮ ಆಹಾರ, ಆರೋಗ್ಯ ಸುಧಾರಣೆ ಮತ್ತು ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದಾಗಿ' ಹೇಳಿದರು.

ಇದಲ್ಲದೆ ಮಹಿಳೆಯರ ಸುರಕ್ಷತೆ ಸಲುವಾಗಿ ವಿಶೇಷ ಪಡೆಗಳನ್ನು ರಚಿಸುವುದು ಮತ್ತು ರಾಜ್ಯದಾದ್ಯಂತ ಮಾದಕವಸ್ತು ನಿರ್ಮೂಲನೆಗಾಗಿ ಪ್ರತಿ ಜಿಲ್ಲೆಯಲ್ಲೂ ಮಾದಕವಸ್ತು ವಿರೋಧಿ ಘಟಕಗಳನ್ನು ಸ್ಥಾಪಿಸುವುದಾಗಿ ಘೋಷಿಸಿದರು.

ಉಚಿತ ವಿದ್ಯುತ್

ಸಿಎಂ ಜೋಸೆಫ್ ವಿಜಯ್ ತಮ್ಮ ಚುನಾವಣಾ ಪ್ರಣಾಳಿಕೆಯ ಪ್ರಮುಖ ಆಶ್ವಾಸನೆಯನ್ನು ಈಡೇರಿಸಿದ್ದು, ಗೃಹ ಬಳಕೆಯ 200 ಯೂನಿಟ್‌ ಉಚಿತ ವಿದ್ಯುತ್‌ ಕಡತಕ್ಕೆ ಸಹಿ ಮಾಡಿದರು. ಅಲ್ಲದೆ ಜನಪರವಾದ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭಾನುವಾರ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?