ಮಮಚಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಮಮತಾ ಬ್ಯಾನರ್ಜಿಗೆ ಈ ಸ್ಥಿತಿ ಬರುತ್ತಿರಲಿಲ್ಲ: ಪ್ರಮೋದ್ ತಿವಾರಿ

ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 294 ಸ್ಥಾನಗಳಲ್ಲಿ 207 ಸ್ಥಾನಗಳನ್ನು ಗೆದ್ದು, ಬ್ಯಾನರ್ಜಿಯವರ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದೆ.

ಮಥುರಾ: ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರೆ, ಅವರಿಗೆ ಈಗಿನ ದುಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಪ್ರಮೋದ್ ತಿವಾರಿ ಸೋಮವಾರ ಹೇಳಿದ್ದಾರೆ.

ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 294 ಸ್ಥಾನಗಳಲ್ಲಿ 207 ಸ್ಥಾನಗಳನ್ನು ಗೆದ್ದು, ಬ್ಯಾನರ್ಜಿಯವರ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದೆ. ಇದೀಗ ಟಿಎಂಸಿ ವಿರೋಧ ಪಕ್ಷಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ವೃಂದಾವನಕ್ಕೆ ಆಗಮಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಮಮತಾ ಬ್ಯಾನರ್ಜಿ ಕಾಂಗ್ರೆಸ್ ಜೊತೆ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ, ಅವರಿಗೆ ಈಗಿನ ದುಸ್ಥಿತಿ ಎದುರಾಗುತ್ತಿರಲಿಲ್ಲ' ಎಂದು ತಿವಾರಿ ಹೇಳಿದರು.

ತಿವಾರಿ ಅವರೊಂದಿಗೆ ಉತ್ತರ ಪ್ರದೇಶ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿ ಆರಾಧನಾ ಮಿಶ್ರಾ ಇದ್ದರು.

ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಗಳನ್ನು ಉಲ್ಲೇಖಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ಕೇಂದ್ರ ಸರ್ಕಾರ ಮತ್ತು ಸಾಂವಿಧಾನಿಕ ಸಂಸ್ಥೆಗಳು ಹಸ್ತಕ್ಷೇಪ ಮಾಡುತ್ತಿರುವ ರೀತಿ ಸಂವಿಧಾನಕ್ಕೆ ಹಾನಿಕಾರಕವಾಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳನ್ನು ನೇಮಿಸಲು ಪಕ್ಷಕ್ಕೆ ತನ್ನದೇ ಆದ ನಾಯಕರ ಕೊರತೆ ಇದೆ. ಬದಲಾಗಿ, ಅವರು ಇತರ ಪಕ್ಷಗಳಿಂದ ಪಕ್ಷಾಂತರಗೊಂಡವರನ್ನು ಆ ಹುದ್ದೆಗೆ ಏರಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವೆ ಬಿರುಕುಗಳು ಉಂಟಾಗುವುದು ಖಚಿತ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಂತಿಮವಾಗಿ ಇದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೇರಳ ಮತ್ತು ತಮಿಳುನಾಡಿನ ಚುನಾವಣೆಗಳ ಕುರಿತು ತಿವಾರಿ, 'ನಾವು ಕೇರಳದಲ್ಲಿ ಚುನಾವಣೆಗಳನ್ನು ಗೆದ್ದಿದ್ದೇವೆ ಮತ್ತು ತಮಿಳುನಾಡಿನಲ್ಲಿ ಜಾತ್ಯತೀತತೆಯನ್ನು ಎತ್ತಿಹಿಡಿಯುವ ಪಕ್ಷವನ್ನು ಬೆಂಬಲಿಸಿದ್ದೇವೆ ಎಂದರು.

'ತಮಿಳುನಾಡು ರಾಜ್ಯಪಾಲರು ಗೆದ್ದ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡಲು ಹಿಂಜರಿಯುತ್ತಿದ್ದರು. ಬಿಜೆಪಿ ಅಲ್ಲಿ ಸೋಲನ್ನು ಅನುಭವಿಸಿತು. ಆದರೆ, ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ಬಯಸಿದ್ದರು. ಆದಾಗ್ಯೂ, ಸಿ ಜೋಸೆಫ್ ವಿಜಯ್ ಇತರ ಪಕ್ಷಗಳ ಬೆಂಬಲದೊಂದಿಗೆ ಬಹುಮತ ಗಳಿಸುವ ಮೂಲಕ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾದರು' ಎಂದರು.

ಕಾಂಗ್ರೆಸ್‌ನಿಂದ ಮಾತ್ರ ಬಿಜೆಪಿಯನ್ನು ಸೋಲಿಸಲು ಸಾಧ್ಯ, ಪ್ರಾದೇಶಿಕ ಪಕ್ಷಗಳಿಂದ ಅದು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತ.ನಾಡು ಸಿಎಂ ವಿಜಯ್ ಗೆ ಮೊದಲ ಆಘಾತ; ಒಂದು ಮತದ ಅಂತರದಿಂದ ಗೆದ್ದಿದ್ದ TVK ಶಾಸಕನಿಗೆ ವಿಶ್ವಾಸಮತ ಪ್ರಕ್ರಿಯೆಗೆ ನಿರ್ಬಂಧ!

ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಜಲಕಂಟಕ : ಕೋಡಿಮಠದ ಶ್ರೀ ಸ್ಫೋಟಕ ಭವಿಷ್ಯ!

ಕೇರಳ ಸಿಎಂ ಬಿಕ್ಕಟ್ಟು: ವರಿಷ್ಠರೊಂದಿಗೆ ಮಾತುಕತೆಗಾಗಿ ದೆಹಲಿಗೆ ತೆರಳಿದ ಕೆ. ಸುಧಾಕರನ್, ಇಂದು ಅಂತಿಮ ನಿರ್ಧಾರ ಸಾಧ್ಯತೆ

'ಬಿಜೆಪಿ ನಾಯಕರು ಬುಟ್ಟಿಯೊಳಗಿನ ಏಡಿಗಳಂತೆ: BJP ಮತ್ತು ವಿಶ್ವಾಸ ದ್ರೋಹ ರಕ್ತ ಸಂಬಂಧಿಗಳು; ಮೋದಿಯದ್ದು ಢೋಂಗಿ ಬುದ್ದಿ'

SCROLL FOR NEXT