ಸಾಂದರ್ಭಿಕ ಚಿತ್ರ 
ದೇಶ

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಆದೇಶ!

ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ NTA ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಯುಜಿ (NEET UG 2026) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಅಧಿಕೃತವಾಗಿ ರದ್ದುಗೊಳಿಸಿದೆ.

ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.

ಭಾರತದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ 2026 ಅನ್ನು 'ಗೆಸ್ ಪತ್ರಿಕೆ' ಸೋರಿಕೆ ಆರೋಪದ ನಂತರ ರದ್ದುಪಡಿಸಲಾಗಿದೆ. ಮೇ 3 ರಂದು ನಡೆದ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳಿಂದ ಬಂದ ಮಾಹಿತಿಗಳು ಕಳವಳ ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಮೇ 3, 2026 ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬಗ್ಗೆ ಮೇ 8 ರಂದು ಎನ್‌ಟಿಎ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು.

ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡಿದ ವರದಿಯನ್ನಾಧರಿಸಿ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಹೀಗಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದ ಕಾರಣ, ಕೇಂದ್ರ ಸರ್ಕಾರ ಈಗ ಮಧ್ಯೆ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ.

ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ NTA ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.

ಕಾನೂನು ಜಾರಿ ಸಂಸ್ಥೆಗಳು ಹಂಚಿಕೊಂಡ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಅಭ್ಯರ್ಥಿಗಳು NTA ಯ ಅಧಿಕೃತ ಮಾಹಿತಿಗಳನ್ನು ಮಾತ್ರ ಅವಲಂಬಿಸಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ತಪ್ಪು ಮಾಹಿತಿಯನ್ನು ನಂಬಬಾರದು. ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗುತ್ತಿರುವುದರಿಂದ, ವಿದ್ಯಾರ್ಥಿಗಳು ತಮ್ಮ ತಯಾರಿ ಮಾಡಿಕೊಂಡು ಪರೀಕ್ಷೆಗೆ ಸಿದ್ಧರಾಗಿರಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?