ನರೇಂದ್ರ ಮೋದಿ ಮತ್ತು ನಟ ಕಿಶೋರ್ 
ದೇಶ

ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷಾ ನಟ ಕಿಶೋರ್ ಅವರು, ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಜನರು ಕಡಿಮೆ ಇಂಧನ ಬಳಕೆ ಮಾಡಬೇಕು, ಎಲೆಕ್ಟ್ರಿಕ್ ವಾಹನಗಳ ಬಳಕೆ ಜಾಸ್ತಿ ಮಾಡಬೇಕು ಮತ್ತು ಚಿನ್ನ ಖರೀದಿಸಬಾರದು ಎಂದು ಹೇಳಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷಾ ನಟ ಕಿಶೋರ್ ಅವರು, ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ನಮ್ಮನ್ನು ಇಂಧನ ಉಳಿಸಿ, ಕಡಿಮೆ ಖರ್ಚು ಮಾಡಿ, ಅದೇ ದೇಶಭಕ್ತಿ ಎಂದು ಹೇಳಿದ ಮರುದಿನವೇ ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಇವನೋ???(ಗಲ್ಫ್ ಯುದ್ಧ ಪ್ರಾರಂಭವಾದ ನಂತರದ ಕಳೆದ ಕೆಲವು ತಿಂಗಳುಗಳಲ್ಲಿ ಅವನು ಮಾಡಿದ ಚುನಾವಣಾ ರ್ಯಾಲಿಗಳನ್ನು ಮರೆಯಬಾರದು) ಅಥವಾ ಇವನ ಮಾತನ್ನು ನಂಬಿ, ಮತ ಹಾಕಿ ಇವನನ್ನು ಅಧಿಕಾರದಲ್ಲಿಡುವ ಜನರೋ??? ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿ ಕಾರಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಜಗತ್ತು ನಿರಂತರವಾಗಿ ಅಸ್ಥಿರ ಪರಿಸ್ಥಿತಿಗಳ ಮೂಲಕ ಹಾದುಹೋಗುತ್ತಿದೆ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದಿಂದ ಸೃಷ್ಟಿಯಾದ ಸನ್ನಿವೇಶಗಳು ದಶಕದ ಪ್ರಮುಖ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.

ದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, 'ವೋಕಲ್ ಫಾರ್ ಲೋಕಲ್' ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ