ರೇಖಾ ಗುಪ್ತಾ 
ದೇಶ

ದೆಹಲಿ ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್; 6 ತಿಂಗಳು ಹೊಸ ವಾಹನ ಖರೀದಿ ಮಾಡುವಂತಿಲ್ಲ!

ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಅಧಿಕಾರಿಗಳು ಮುಂದಿನ ಒಂದು ವರ್ಷದವರೆಗೆ ಯಾವುದೇ ಅಧಿಕೃತ ವಿದೇಶ ಪ್ರವಾಸ ಕೈಗೊಳ್ಳುವಂತಿಲ್ಲ ಎಂದು ಸರ್ಕಾರ ಹೇಳಿದೆ.

ನವದೆಹಲಿ: ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ 'ವರ್ಕ್ ಫ್ರಮ್ ಹೋಮ್' ಮಾಡುವಂತೆ ಸಲಹೆ ನೀಡಿದ್ದೇ ತಡ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರಕ್ಕೆ ಎರಡು ದಿನ ಮನೆಯಿಂದಲೇ ಕೆಲಸ ಮತ್ತು ವಾಹನಗಳ ಕನಿಷ್ಠ ಬಳಕೆ ಘೋಷಿಸಿದ್ದಾರೆ.

ದೆಹಲಿ ಸರ್ಕಾರದ ಈ ನಿರ್ಧಾರ ನಾಳೆಯಿಂದಲೇ ಜಾರಿಗೆ ಬರಲಿದ್ದು, ಇಂಧನ ಉಳಿತಾಯ ಮತ್ತು ದಕ್ಷ ಆಡಳಿತವನ್ನು ಉತ್ತೇಜಿಸಲು ಬಿಜೆಪಿ ನೇತೃತ್ವದ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ "ಮೇರಾ ಭಾರತ್ ಮೇರಾ ಯೋಗದಾನ್"(ನನ್ನ ಭಾರತ, ನನ್ನ ಕೊಡುಗೆ) ಅಭಿಯಾನವನ್ನು ಪ್ರಾರಂಭಿಸುತ್ತಿದೆ.

ಪ್ರತಿ ಸೋಮವಾರ "ಮೆಟ್ರೋ ಸೋಮವಾರ" ಎಂದು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ದಿನ ಎಲ್ಲಾ ಸಚಿವರು, ಅಧಿಕಾರಿಗಳು ಮತ್ತು ಉದ್ಯೋಗಿಗಳು ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಸರ್ಕಾರ ಸೂಚಿಸಿದೆ.

ವಾರದಲ್ಲಿ ಒಂದು ದಿನ "ವಾಹನ ರಹಿತ ದಿನ"ವನ್ನು ಆಚರಿಸಲು ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ.

ದೆಹಲಿಯಲ್ಲಿ ಮುಂದಿನ ಆರು ತಿಂಗಳವರೆಗೆ ಯಾವುದೇ ಹೊಸ ಪೆಟ್ರೋಲ್, ಡೀಸೆಲ್ ಅಥವಾ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.

ಇನ್ನೂ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆಯನ್ನು ಶೇ. 10 ರಷ್ಟು ಹೆಚ್ಚಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ವಿದೇಶಿ ಪ್ರಯಾಣಕ್ಕೂ ನಿಷೇಧ

ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಅಧಿಕಾರಿಗಳು ಮುಂದಿನ ಒಂದು ವರ್ಷದವರೆಗೆ ಯಾವುದೇ ಅಧಿಕೃತ ವಿದೇಶ ಪ್ರವಾಸ ಕೈಗೊಳ್ಳುವಂತಿಲ್ಲ ಎಂದು ಸರ್ಕಾರ ಹೇಳಿದೆ.

ಹೆಚ್ಚುವರಿಯಾಗಿ, ಜಾಗೃತಿ ಮೂಡಿಸಲು 90 ದಿನಗಳ ಅಭಿಯಾನ ನಡೆಸಲಾಗುವುದು. ಇಂಧನ ಉಳಿತಾಯವನ್ನು ಉತ್ತೇಜಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವ ಪ್ರತಿಜ್ಞೆಯನ್ನು ನಾಗರಿಕರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹವಾನಿಯಂತ್ರಣಗಳನ್ನು 24 ರಿಂದ 26 ಡಿಗ್ರಿ ಸೆಲ್ಸಿಯಸ್ ನಡುವೆ ಹೊಂದಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR Stage 3: ಕರ್ನಾಟಕ ಸೇರಿ ಮೇ 30ರಿಂದ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗ

ಕೇರಳ ಸಸ್ಪೆನ್ಸ್ ಗೆ ಕೊನೆಗೂ ಬಿತ್ತು ತೆರೆ: ನೂತನ ಮುಖ್ಯಮಂತ್ರಿಯಾಗಿ VD Satheesan ಆಯ್ಕೆ

Affair Rumours: ಸಿಎಂ ವಿಜಯ್ ಅನುಮತಿಯಿದ್ದರೂ ಕೊನೆ ಕ್ಷಣದಲ್ಲಿ ‘ಕರುಪ್ಪ್’ರದ್ದು!

ಹಾರ್ಮುಜ್ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಮುಕ್ತ, ಆದರೆ...: ಇರಾನ್ ವಿದೇಶಾಂಗ ಸಚಿವ ಅರಘ್ಚಿ

ಅಮೆರಿಕ-ಚೀನಾ ಶೃಂಗಸಭೆ ಆರಂಭವಾಗುತ್ತಿದ್ದಂತೆ ಟ್ರಂಪ್‌ಗೆ 'ಖಡಕ್' ವಾರ್ನಿಂಗ್‌ ಕೊಟ್ಟ ಕ್ಸಿ ಜಿನ್‌ಪಿಂಗ್‌!

SCROLL FOR NEXT