ತಮಿಳುನಾಡು ಮುಖ್ಯಮಂತ್ರಿ ವಿಜಯ್ 
ದೇಶ

ಅರ್ಹ ಮಹಿಳಾ ಫಲಾನುಭವಿಗಳಿಗೆ ಶೀಘ್ರದಲ್ಲೇ ಮೇ ತಿಂಗಳ ಕಂತು ₹1000 ಸಿಗಲಿದೆ: ತಮಿಳುನಾಡು ಸಿಎಂ ವಿಜಯ್

ಏಪ್ರಿಲ್ 23ರ ವಿಧಾನಸಭೆ ಚುನಾವಣೆಗೆ ಮುನ್ನ ವಿಜಯ್ ಅವರ ಟಿವಿಕೆ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಮಾಸಿಕ ₹2,500 ನೀಡುವುದಾಗಿ ಭರವಸೆ ನೀಡಿತ್ತು.

ಚೆನ್ನೈ: 'ಕಲೈಗ್ನಾರ್ ಮಗಲಿರ್ ಉರಿಮೈ ತೊಗೈ' ಯೋಜನೆಯಡಿ ಬರುವ ಮಹಿಳಾ ಫಲಾನುಭವಿಗಳಿಗೆ ಮೇ ತಿಂಗಳ ಕಂತು ₹1000 ಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಗುರುವಾರ ಘೋಷಿಸಿದ್ದಾರೆ.

ಹಿಂದಿನ ಡಿಎಂಕೆ ಆಡಳಿತವು ಜಾರಿಗೆ ತಂದ ಮತ್ತು ಪಕ್ಷದ ದಿವಂಗತ ಎಂ ಕರುಣಾನಿಧಿ ಅವರ ಹೆಸರಿಡಲಾದ ಯೋಜನೆಯ ಮೊತ್ತವನ್ನು ಶೀಘ್ರವೇ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ವಿಜಯ್ ಅವರನ್ನು ಉಲ್ಲೇಖಿಸಿ ಸರ್ಕಾರಿ ಪ್ರಕಟಣೆ ತಿಳಿಸಿದೆ.

'ಕಲೈಗ್ನಾರ್ ಮಗಲಿರ್ ಉರಿಮೈ ತೊಗೈ ಯೋಜನೆಯನ್ನು ಪುನರ್ ರಚಿಸಲು ಸರ್ಕಾರಕ್ಕೆ ಸಮಯ ಬೇಕಾಗಿದೆ. ಇದರ ಅಡಿಯಲ್ಲಿ ಮಹಿಳೆಯರಿಗೆ ₹1,000 ಗಳನ್ನು ನೀಡಲಾಗುತ್ತದೆ. ಈ ಯೋಜನೆಯಡಿಯಲ್ಲಿ ಮೇ ತಿಂಗಳ ₹ 1000 ಗಳನ್ನು ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಸಿಎಂ ಜೋಸೆಫ್ ವಿಜಯ್ ನಿರ್ದೇಶನ ನೀಡಿದ್ದಾರೆ' ಎಂದು ಅದು ಹೇಳಿದೆ.

ಏಪ್ರಿಲ್ 23ರ ವಿಧಾನಸಭೆ ಚುನಾವಣೆಗೆ ಮುನ್ನ ವಿಜಯ್ ಅವರ ಟಿವಿಕೆ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಮಾಸಿಕ ₹2,500 ನೀಡುವುದಾಗಿ ಭರವಸೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋನೇಷ್ಯಾ ಸಂಸತ್ತಿನಲ್ಲಿ ಒಡಿಶಾದ ಮಾಜಿ ಸಿಎಂ ಬಿಜು ಪಟ್ನಾಯಕ್ ಪರಾಕ್ರಮ ಬಣ್ಣಿಸಿದ ಪ್ರಧಾನಿ ಮೋದಿ!

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಜೆಂಟೀನಾ ಲಗ್ಗೆ!

E20 ಪೆಟ್ರೋಲ್‌ನಿಂದಾಗಿ ಎಂಜಿನ್‌ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು - Video

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!