ಎನ್. ಚಂದ್ರಬಾಬು ನಾಯ್ಡು 
ದೇಶ

ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವದ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!

ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ.

ಶ್ರೀಕಾಕುಳಂ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ಜನಸಂಖ್ಯಾ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ ಶನಿವಾರ ಮಹತ್ವದ ಘೋಷಣೆ ಮಾಡಿದ್ದು, ಮೂರನೇ ಮಗು ಪಡೆಯುವ ದಂಪತಿಗೆ 30,000 ಮತ್ತು ನಾಲ್ಕನೇ ಮಗುವಿನ ಜನನಕ್ಕೆ 40,000 ಆರ್ಥಿಕ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದ್ದಾರೆ.

ಇಂದು ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಾಯ್ಡು, ರಾಜ್ಯ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಹೆಚ್ಚುವರಿ ವಿವರಗಳನ್ನು ಒಂದು ತಿಂಗಳೊಳಗೆ ಪ್ರಕಟಿಸಲಾಗುವುದು ಎಂದು ಹೇಳಿದರು.

"ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ. ಇದು ಸರಿಯಾದ ನಿರ್ಧಾರವಲ್ಲವೇ?" ಎಂದು ಸ್ವರ್ಣಆಂಧ್ರ–ಸ್ವಚ್ಛಆಂಧ್ರ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ನಾಯ್ಡು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆದಾಗ್ಯೂ, ನಾಯ್ಡು ಈ ಹಿಂದೆ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಬೆಂಬಲಿಸಿದ್ದರು. ಪ್ರಸ್ತುತ ಜನಸಂಖ್ಯಾ ಪರಿಸ್ಥಿತಿಯು ಜನನ ಪ್ರಮಾಣವನ್ನು ಹೆಚ್ಚಿಸಲು ಸಮಾಜವು ಸಾಮೂಹಿಕವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಎರಡನೇ ಮಗು ಪಡೆಯುವ ದಂಪತಿಗೆ 25,000 ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ನಾಯ್ಡು ಅವರು ಕಳೆದ ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು. ಅದರ ಮುಂದುವರೆದ ಭಾಗ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್