ಬಂಧಿತ ವ್ಯಕ್ತಿ 
ದೇಶ

ಗುಜರಾತ್: 2,000 ರೂ ಬಾಡಿಗೆ ಕಟ್ಟಲಾಗದೆ, ಹೆಂಡತಿ, ಮಗಳನ್ನು ಮನೆ ಮಾಲೀಕನಿಗೆ ಅಡವಿಟ್ಟ ವ್ಯಕ್ತಿಯ ಬಂಧನ!

ಗುಜರಾತ್‌ನ ಸುರೇಂದ್ರನಗರದ ಕುಟುಂಬವು ಸುಮಾರು ಆರು ತಿಂಗಳ ಹಿಂದೆ ಜೀವನೋಪಾಯವನ್ನು ಹುಡುಕುತ್ತಾ ಮೋರ್ಬಿಗೆ ಸ್ಥಳಾಂತರಗೊಂಡಿತು. ತಿಂಗಳಿಗೆ 2,000 ರೂ. ಬಾಡಿಗೆ ಮನೆಯೊಂದರಲ್ಲಿ ಉಳಿದುಕೊಂಡಿದ್ದರು.

ಮೋರ್ಬಿ: 2,000 ರೂ. ಬಾಡಿಗೆ ಕಟ್ಟಲು ಸಾಧ್ಯವಾಗದೆ ತನ್ನ ಹೆಂಡತಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಲು ಮನೆ ಮಾಲೀಕನೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಗುಜರಾತಿನ ಮೊರ್ಬಿಯಲ್ಲಿ ಈ ಪ್ರಕರಣ ನಡೆದಿದೆ.

ಗುಜರಾತ್‌ನ ಸುರೇಂದ್ರನಗರದ ಕುಟುಂಬವು ಸುಮಾರು ಆರು ತಿಂಗಳ ಹಿಂದೆ ಜೀವನೋಪಾಯವನ್ನು ಹುಡುಕುತ್ತಾ ಮೋರ್ಬಿಗೆ ಸ್ಥಳಾಂತರಗೊಂಡಿತು. ತಿಂಗಳಿಗೆ 2,000 ರೂ. ಬಾಡಿಗೆ ಮನೆಯೊಂದರಲ್ಲಿ ಉಳಿದುಕೊಂಡಿದ್ದರು.

ಆದರೆ, ಅವರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದರು. ಇದರ ಪರಿಣಾಮವಾಗಿ ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿರಲಿಲ್ಲ ಎನ್ನಲಾಗಿದೆ. ಇದರಿಂದ ಹತಾಶನಾದ ವ್ಯಕ್ತಿ, ಬಾಕಿ ಇರುವ ಬಾಡಿಗೆಗೆ ಬದಲಿಗೆ ತನ್ನ ಹೆಂಡತಿ ಮತ್ತು ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮನೆ ಮಾಲೀಕನೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಎನ್ನಲಾಗಿದೆ.

ವ್ಯಕ್ತಿಯ ಹಲ್ಲೆಯ ಬಗ್ಗೆ ತಿಳಿದು ಅತ್ತೆ, ಮೋರ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (POCSO) ಸೇರಿದಂತೆ ಕಠಿಣ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಳಿಕ ತಂದೆ ಮತ್ತು ಮನೆ ಮಾಲೀಕನನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಮತ್ತು ಮನೆ ಮಾಲೀಕ ಸೇರಿ ಈ ದೌರ್ಜನ್ಯವೆಸಗಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಎಂ. ಲಾಲ್ ಹೇಳಿದ್ದಾರೆ.

ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮೂರನೇ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel