ದೇಶ

ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧಿಸಿದ CBI

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಪಿಎ ಕೊಲೆ ಪ್ರಕರಣದ ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ನನ್ನು ಸಿಬಿಐ, ಮುಜಫರ್‌ನಗರ ಪೊಲೀಸರ ಸಹಯೋಗದೊಂದಿಗೆ ಬಂಧಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಪಿಎ ಕೊಲೆ ಪ್ರಕರಣದ ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ನನ್ನು ಸಿಬಿಐ, ಮುಜಫರ್‌ನಗರ ಪೊಲೀಸರ ಸಹಯೋಗದೊಂದಿಗೆ ಬಂಧಿಸಿದೆ. ಆರೋಪಿಯನ್ನು ಮುಜಫರ್‌ನಗರದಲ್ಲಿ ಬಂಧಿಸಲಾಗಿದೆ. ಸಿಬಿಐ ಆರೋಪಿಯ ಟ್ರಾನ್ಸಿಟ್ ರಿಮಾಂಡ್ ಪಡೆದುಕೊಂಡಿದ್ದು, ಮಂಗಳವಾರ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾದ ಎರಡು ದಿನಗಳ ನಂತರ, ಮೇ 6ರ ರಾತ್ರಿ ಸುವೇಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ರಥ್ ಕೋಲ್ಕತ್ತಾಗೆ ತೆರಳುತ್ತಿದ್ದಾಗ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ಡೋಲಾಟಲಾ ಪ್ರದೇಶದಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಪ್ರಸ್ತುತ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.

ರಥ್ ಹತ್ಯೆಯ ನಂತರ, ವಿಶೇಷ ತನಿಖಾ ತಂಡ (SIT) ರಚಿಸಲಾಯಿತು. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ರಥ್ ಅವರ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮಾಡುವುದಾಗಿ ಭರವಸೆ ನೀಡಿದರು. ಪ್ರಕರಣವನ್ನು ನಂತರ ಸಿಬಿಐಗೆ ಹಸ್ತಾಂತರಿಸಿದ್ದರು. ಮೊದಲಿಗೆ ಮಾಯಾಂಕ್ ರಾಜ್ ಮಿಶ್ರಾ, ವಿಕ್ಕಿ ಮೌರ್ಯ ಮತ್ತು ರಾಜ್ ಸಿಂಗ್ ಎಂಬ ಮೂವರನ್ನು ಬಂಧಿಸಲಾಗಿತ್ತು. ಈಗ ರಾಜ್ ಕುಮಾರ್ ಸಿಂಗ್ ಬಂಧನದೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಕ್ಕೆ ಸೆಡ್ಡು: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಮುಖ ಹೆಜ್ಜೆ; ಹೊಸ ಪ್ರಾಧಿಕಾರ ರಚನೆ!

ಭಾರತದ ಮೊದಲ ಬುಲೆಟ್ ರೈಲಿನ 'ಫಸ್ಟ್ ಲುಕ್' ರಿಲೀಸ್‌: ಸಂಚಾರ ಯಾವಾಗಿಂದ ಆರಂಭ?

ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಸಲ್ಲಿಸಿದ ಪಾಕಿಸ್ತಾನ; ಒಪ್ಪಿಕೊಳ್ಳುತ್ತಾರಾ ಟ್ರಂಪ್?

'ಅಮ್ಮ ಕ್ಯಾಂಟೀನ್‌' ಆಧುನೀಕರಿಸಲು ತಮಿಳುನಾಡು ಸಿಎಂ ವಿಜಯ್ ಆದೇಶ; ಅಚ್ಚರಿ ಮೂಡಿಸಿದ ದಳಪತಿ ನಡೆ

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

SCROLL FOR NEXT