ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ಕೇರಳ ಸಂಪುಟ ಸಚಿವರೊಂದಿಗೆ ವಿ. ಡಿ. ಸತೀಶನ್. 
ದೇಶ

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!

ತಿರುವನಂತಪುರದಲ್ಲಿ ನಡೆದ ಪ್ರಮಾಣವಚನ ಸಮಾರಂಭದ ವೇಳೆ ಈ ವಿಚಾರವನ್ನು ಖರ್ಗೆ ನೇರವಾಗಿ ಮುಖ್ಯಮಂತ್ರಿ ಸತೀಶನ್ ಅವರ ಗಮನಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಿರುವನಂತಪುರ: ಕೇರಳದಲ್ಲಿ ನೂತನ ಸರ್ಕಾರದ ಸಚಿವ ಸಂಪುಟ ಹಂಚಿಕೆ ವಿಚಾರ ತೀವ್ರ ರಾಜಕೀಯ ಗೊಂದಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಖಾತೆ ಹಂಚಿಕೆ ಸಲಹೆಯನ್ನು ನಿರಾಕರಿಸಿದ್ದಾರೆಂದು ತಿಳಿದುಬಂದಿದೆ, ಈ ಬೆಳವಣಿಗೆ ಪಕ್ಷದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ.

ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳಿಗೆ ಪ್ರಮುಖ ಖಾತೆಗಳು ನೀಡಲಾಗಿಲ್ಲ ಎಂಬ ಅಸಮಾಧಾನ ಪಕ್ಷದೊಳಗೆ ಹೆಚ್ಚುತ್ತಿದೆ ಎನ್ನಲಾಗಿದೆ.

ಸಾಮಾಜಿಕ ನ್ಯಾಯ ಮತ್ತು ಸಮಾವೇಶಿತ ಆಡಳಿತದ ಕುರಿತು ಪಕ್ಷ ನೀಡಿದ್ದ ಭರವಸೆಗಳಿಗೆ ಇದು ವಿರುದ್ಧವಾಗಿದೆ ಎಂದು ಕೆಲ ನಾಯಕರು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಸಚಿವರಿಗೆ ನೀಡಲಾದ ಕಡಿಮೆ ಮಹತ್ವದ ಖಾತೆಗಳ ಬಗ್ಗೆ ಆಕ್ಷೇಪ ಎತ್ತಿದ್ದಾರೆ ಎನ್ನಲಾಗಿದೆ.

ತಿರುವನಂತಪುರದಲ್ಲಿ ನಡೆದ ಪ್ರಮಾಣವಚನ ಸಮಾರಂಭದ ವೇಳೆ ಈ ವಿಚಾರವನ್ನು ಖರ್ಗೆ ನೇರವಾಗಿ ಮುಖ್ಯಮಂತ್ರಿ ಸತೀಶನ್ ಅವರ ಗಮನಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಆರೋಗ್ಯ, ದೇವಸ್ವಂ (ಹಿಂದೂ ದೇವಾಲಯಗಳ ಆಡಳಿತ, ಆಸ್ತಿ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ನಿರ್ವಹಿಸುವ ಸಾಮಾಜಿಕ-ಧಾರ್ಮಿಕ ಮಂಡಳಿ (ಟ್ರಸ್ಟ್) ಹಾಗೂ ಸಹಕಾರ ಇಲಾಖೆಗಳನ್ನು ಕೆಲ ಸಚಿವರಿಂದ ಹಿಂಪಡೆಯಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದರಿಂದ ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ಹೆಚ್ಚಿದೆ.

ಆದರೆ, ಮುಖ್ಯಮಂತ್ರಿ ಸತೀಶನ್ ತಮ್ಮ ನಿಲುವಿನಲ್ಲಿ ದೃಢವಾಗಿ ನಿಂತು ಖರ್ಗೆಯವರ ಸಲಹೆಯನ್ನು ಒಪ್ಪದೆ ಮುಂದುವರಿದಿದ್ದಾರೆ ಎಂದು ವರದಿಯಾಗಿದೆ.

ಇದರ ಪರಿಣಾಮವಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಮುಂದಿನ ಚರ್ಚೆಗಳಿಂದ ಹಿಂದೆ ಸರಿದಿದೆ ಎಂದು ತಿಳಿದುಬಂದಿದೆ. ಇದರಿಂದ ಸಂಪುಟ ಹಂಚಿಕೆ ಅಂತಿಮಗೊಳಿಸುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಿದೆ ಎನ್ನಲಾಗುತ್ತಿದೆ.

ಈ ನಡುವೆ ಕಾಂಗ್ರೆಸ್ ಹಾಗೂ ಅದರ ಮೈತ್ರಿಕೂಟಗಳ ನಡುವೆ ಹಾಗೂ ಪಕ್ಷದ ಒಳಗೇ ಸಚಿವ ಖಾತೆಗಳ ಹಂಚಿಕೆ ಕುರಿತು ತೀವ್ರ ಭಿನ್ನಾಭಿಪ್ರಾಯಗಳು ಉಂಟಾಗಿವೆ. ಇದರಿಂದ ಸರ್ಕಾರ ರಾಜ್ಯಪಾಲರಿಗೆ ಅಂತಿಮ ಪಟ್ಟಿಯನ್ನು ಸಲ್ಲಿಸುವ ಪ್ರಕ್ರಿಯೆಯೂ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.

ಪಕ್ಷದೊಳಗಿನ ಅಸಮಾಧಾನವೂ ಹೆಚ್ಚಾಗಿದ್ದು, ಟಿ ಸಿದ್ದಿಕ್ ಹಾಗೂ ಎಂ ಲಿಜು ಸೇರಿದಂತೆ ಹಲವು ನಾಯಕರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ, ಮುಸ್ಲಿಂ ಲೀಗ್‌ಗೆ ಮೀನುಗಾರಿಕೆ ಅಥವಾ ಉನ್ನತ ಶಿಕ್ಷಣ ಖಾತೆ ನೀಡುವ ಕುರಿತು ಕೂಡ ಗಂಭೀರ ಚರ್ಚೆ ನಡೆಯುತ್ತಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಕ್ರಿಶ್ಚಿಯನ್ ಚರ್ಚ್‌ಗಳು ಮಧ್ಯಪ್ರವೇಶಿಸಿದ್ದು, ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ ಮತ್ತು ಸೈರೋ-ಮಲಬಾರ್ ಚರ್ಚ್ ವಿಭಿನ್ನ ನಿಲುವುಗಳನ್ನು ವ್ಯಕ್ತಪಡಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ. ಈ ಎಲ್ಲಾ ಬೆಳವಣಿಗೆಗಳು ಕೇರಳ ರಾಜಕೀಯದಲ್ಲಿ ಹೊಸ ಒತ್ತಡ ಸೃಷ್ಟಿಸಿದ್ದು, ಸಚಿವ ಸಂಪುಟ ಹಂಚಿಕೆ ಅಂತಿಮಗೊಳಿಸುವಲ್ಲಿ ಸರ್ಕಾರಕ್ಕೆ ದೊಡ್ಡ ಸವಾಲು ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team Indiaನ ಹಿಂದಿಕ್ಕಿದ ಬಾಂಗ್ಲಾ!

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

SCROLL FOR NEXT