ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಮತ್ತೋರ್ವ ಶಿಕ್ಷಕಿ ಬಂಧನ 
ದೇಶ

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

ಕೇಂದ್ರೀಯ ತನಿಖಾ ಸಂಸ್ಥೆ CBI ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ.

ಪುಣೆ: ಮಹತ್ವದ ಬೆಳವಣಿಗೆಯಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಂಧನ ಮಾಡಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆ (Central Bureau of Investigation) (CBI) ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಂಧಿತ ಉಪನ್ಯಾಸಕಿಯನ್ನು ಮನಿಶಾ ಸಂಜಯ್ ಹವಾಲ್ದಾರ್ (Manisha Sanjay Havaldar) ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಪುಣೆಯ ಸೇಠ್ ಹಿರಾಲಾಲ್ ಶರಾಫ್ ಪ್ರಶಾಲಾ (Seth Hiralal Saraf Prashala) ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆಕೆಯೇ “ಮೂಲ ವ್ಯಕ್ತಿ” ಎಂದು CBI ಆರೋಪಿಸಿದೆ.

“NEET-UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಮುಖ ಆರೋಪಿಗಳಲ್ಲಿ ಮತ್ತೊಬ್ಬರನ್ನು CBI ಗುರುತಿಸಿದೆ” ಎಂದು CBI ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NTA ತಜ್ಞೆಯಾಗಿದ್ದ ವೇಳೆ ಪ್ರಶ್ನೆ ಪತ್ರಿಕೆ ಕಳವು

CBI ಮಾಡಿರುವ ಆರೋಪದಂತೆ ಮನೀಷಾ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(National Testing Agency) (NTA) ಪರೀಕ್ಷಾ ತಜ್ಞೆಯಾಗಿ ನೇಮಿಸಲಾಗಿತ್ತು. ಈ ಕಾರಣದಿಂದ ಅವರಿಗೆ ಭೌತಶಾಸ್ತ್ರ ಪ್ರಶ್ನೆಪತ್ರಿಕೆಗೆ ಸಂಪೂರ್ಣ ಪ್ರವೇಶವಿತ್ತು. ಅವರು ಏಪ್ರಿಲ್ ತಿಂಗಳಲ್ಲಿ ಕೆಲವು ಪ್ರಶ್ನೆಗಳನ್ನು ಸಹ ಆರೋಪಿಯಾಗಿರುವ ಮನಿಷಾ ಮಂಡಾರೆಗೆ ಹಂಚಿಕೊಂಡಿದ್ದರು ಎಂದು CBI ಹೇಳಿದೆ.

CBI ಈ ಹಿಂದೆ ಮೇ 16ರಂದು ಪುಣೆಯ ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಮಂಧಾರೆ ಎಂಬುವವರನ್ನು ಇದೇ ಪ್ರಕರಣದಲ್ಲಿ ಬಂಧಿಸಿತ್ತು. ತನಿಖೆಯಲ್ಲಿ ಹವಾಲ್ದಾರ್ ಹಂಚಿಕೊಂಡಿದ್ದ ಪ್ರಶ್ನೆಗಳು NEET UG 2026ರ ಭೌತಶಾಸ್ತ್ರ ಪ್ರಶ್ನೆಪತ್ರಿಕೆಯೊಂದಿಗೆ ಹೊಂದಿಕೆಯಾಗಿರುವುದು ಪತ್ತೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇನ್ನು CBI ದೇಶದ ವಿವಿಧ ಭಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹಲವು ಮಹತ್ವದ ದಾಖಲೆಗಳು, ಲ್ಯಾಪ್‌ಟಾಪ್‌ಗಳು, ಬ್ಯಾಂಕ್ ಸ್ಟೇಟ್ಮೆಂಟ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. “ವಶಪಡಿಸಿಕೊಂಡಿರುವ ವಸ್ತುಗಳ ಸವಿಸ್ತಾರ ವಿಶ್ಲೇಷಣೆ ಮುಂದುವರಿದಿದೆ,” ಎಂದು ತನಿಖಾ ಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

ಬಾರೂಯೀಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಲಿ..!

ತೈಲ ಹಡಗುಗಳ ಮೇಲಿನ ದಾಳಿಗೆ ಅಮೆರಿಕಾ ಸೇಡು: ಇರಾನ್ ಮೇಲೆ ಭೀಕರ ವೈಮಾನಿಕ ದಾಳಿ, ಪ್ರತೀಕಾರದ ಎಚ್ಚರಿಕೆ ಕೊಟ್ಟ ಟೆಹ್ರಾನ್..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಕಾರ್ಯಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!