ಪೋಸ್ಟರ್ 
ದೇಶ

Cockroach Janta Partyಗೆ ಪಾಕ್-ಬಾಂಗ್ಲಾದೇಶಿ ಫಾಲೋವರ್ಸ್‌ಗಳೇ ಹೆಚ್ಚು; ಇದು ದೊಡ್ಡ ಸಂಚು ಎಂದ ನೆಟ್ಟಿಗರು

ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ, ವಿದೇಶಿ ಫಾಲೋವರ್ಸ್‌ ಕಡೆಗೆ ಬೆರಳು ತೋರಿಸಿದೆ.

ನವದೆಹಲಿ: ಆರಂಭವಾದ ಆರೇ ದಿನಗಳಲ್ಲಿ ಸಾಮಾಜಿಕ ಮಾಧ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಕೇಂದ್ರದ ಆಡಳಿತರೂಢ ಬಿಜೆಪಿಯನ್ನೇ ಹಿಂದಿಕ್ಕಿದೆ.

ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ, ವಿದೇಶಿ ಫಾಲೋವರ್ಸ್‌ ಕಡೆಗೆ ಬೆರಳು ತೋರಿಸಿದೆ.

ಸಿಜೆಪಿ ಫಾಲೋವರ್ಸ್‌ ಗಳಲ್ಲಿ ಹೆಚ್ಚಿನವರು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಟರ್ಕಿಯಲ್ಲಿ ನೆಲೆಸಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ. ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು, ಕಾಕ್ರೋಚ್ ಜನತಾ ಪಕ್ಷದ ಫಾಲೋವರ್ಸ್‌ ಗಳು ಶೇ. 94 ರಷ್ಟು ಭಾರತೀಯರು ಎಂದು ತಿರುಗೇಟು ನೀಡಿದ್ದಾರೆ.

ಪ್ರಸ್ತುತ ಸೋಶಿಯಲ್​​ ಮೀಡಿಯಾದಲ್ಲಿ ವಿಭಿನ್ನ ಹಾಗೂ ತಮಾಷೆಯ ಕಂಟೆಂಟ್ ಮೂಲಕ ಯುವ ಪೀಳಿಗೆಯ ಗಮನ ಸೆಳೆದಿರುವ ಟ್ರೆಂಡಿಂಗ್ ಖಾತೆ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janta Party) ಪೇಜ್ ಸದ್ಯ ವಿಶ್ವಾದ್ಯಂತ ಬರೋಬ್ಬರಿ 14.8 ಮಿಲಿಯನ್ (1.48 ಕೋಟಿ) ಫಾಲೋವರ್ಸ್ ಹೊಂದುವ ಮೂಲಕ ಹೊಸ ದಾಖಲೆ ಬರೆದಿದೆ.

ವೈರಲ್ ಆಗಿರುವ ವರದಿಯ ಪ್ರಕಾರ, ಈ ಪೇಜ್ ಹೊಂದಿರುವ ಒಟ್ಟು ಫಾಲೋವರ್ಸ್‌ಗಳ ಪೈಕಿ ಸಿಂಹಪಾಲು ಅಂದರೆ ಬರೋಬ್ಬರಿ ಶೇಕಡಾ 49 ರಷ್ಟು (ಶೇ. 49) ಜನರು ಪಾಕಿಸ್ತಾನ ಮೂಲದವರಾಗಿದ್ದಾರೆ! ಇದು ಇಂಟರ್ನೆಟ್ ವಲಯದಲ್ಲಿ ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್